ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಅಕ್ರಮ-ಸಕ್ರಮ ಯೋಜನೆ: ಸುಪ್ರೀಂ ಶೀಘ್ರ ವಿಚಾರಣೆ

|
Google Oneindia Kannada News

ನವದೆಹಲಿ, ಜನವರಿ 12: ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ಬೆಂಗಳೂರಿನ ಅಕ್ರಮ-ಸಕ್ರಮ ಪ್ರಕರಣದ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಕೊನೆಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಬೆಂಗಳೂರಿನಲ್ಲಿರುವ ಕಟ್ಟಡಗಳಲ್ಲಿನ ಅಕ್ರಮವನ್ನು ಸಕ್ರಮ ಮಾಡಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಫೌಂಡೇಶನ್ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಕರಣದ ವಿಚಾರಣೆ ವಿಳಂಬವಾಗಿತ್ತು. ಹೀಗಾಗಿ ಬಿಬಿಎಂಪಿ ಪ್ರಕರಣದ ಶೀಘ್ರ ವಿಚಾರಣೆಗೆ ಮನವಿ ಮಾಡಿತ್ತು. ಇದಕ್ಕೆ ಒಪ್ಪಿದ ಸುಪ್ರೀಂಕೋರ್ಟ್ ಶೀಘ್ರ ವಿಚಾರಣೆಗೆ ಮುಂದಾಗಿದೆ.

ಅಕ್ರಮ -ಸಕ್ರಮ ಯೋಜನೆಗೆ ಸುಪ್ರೀಂನಿಂದ ತಡೆಯಾಜ್ಞೆಅಕ್ರಮ -ಸಕ್ರಮ ಯೋಜನೆಗೆ ಸುಪ್ರೀಂನಿಂದ ತಡೆಯಾಜ್ಞೆ

ಕರ್ನಾಟಕ ಟೌನ್ ಮತ್ತು ಕಂಟ್ರಿ ಪ್ಲಾನಿಂಗ್ ಕಾಯ್ದೆಗೆ ತಿದ್ದುಪಡಿ ಕಟ್ಟಡ ನಿರ್ಮಾಣದಲ್ಲಿನ ಶೇ.50 ರಷ್ಟು ಅಕ್ರಮವನ್ನು ಸಕ್ರಮಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ನಮ್ಮ ಬೆಂಗಳೂರು ಪ್ರತಿಷ್ಠಾನ ಕೋರಿಕೆಯಂತೆ ರಾಜ್ಯ ಹೈಕೋರ್ಟ್ ಆದೇಶಕ್ಕೆ ಕಳೆದ ವರ್ಷದ ಜನವರಿಯಲ್ಲಿ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು.

SC will hear Akrama-Sakrama in Bengaluru

ಇದೀಗ ಪ್ರಕರಣದ ತ್ವರಿತ ಇತ್ಯರ್ಥ ಮಾಡಿ ಎಂದು ಸುಪ್ರೀಂಕೋರ್ಟ್ ಗೆ ಬಿಬಿಎಂಪಿ ಮನವಿ ಮಾಡಿತ್ತು. ಕುರಿತು ಸುಪ್ರೀಂ ಕೋರ್ಟ್ ಶೀಘ್ರ ವಿಚಾರಣೆ ನಡೆಸಲಿದೆ. ಮಾರ್ಚ್ 21 ರಿಂದ ಅಂತಿಮವಾಗಿ ವಿಚಾರಣೆ ನಡೆಸುವುದಾಗಿ ನ್ಯಾ. ಸೀಪಕ್ ಮಿಶ್ರಾ ಅವರ ಪೀಠ ಹೇಳಿದೆ.

ಸಂಕ್ರಾಂತಿ ವಿಶೇಷ ಪುಟ

English summary
Supreme Court on Friday given a assent to hear the case of most awaited Akrama-Sakrama scheme in Bengaluru for extend the regularising up to 50 percent irregularities in the buildings.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X