ಅಂತೂ ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ಕೂಡಿ ಬಂತು ಕಾಲ
Recommended Video
ನವದೆಹಲಿ, ಸೆಪ್ಟೆಂಬರ್ 17: ಅನರ್ಹ ಶಾಸಕರ ಅರ್ಜಿ ವಿಚಾರಣೆ ಇಂದು(ಸೆ.17)ನಡೆಯಲಿದ್ದು, ನ್ಯಾ. ಎನ್.ವಿ ರಮಣ, ನ್ಯಾ.ಮೋಹನ್ ಶಾಂತನಗೌಡ ಮತ್ತು ನ್ಯಾ.ಅಜಯ್ ರಸ್ತೋಗಿ ಅವರಿರುವ ತ್ರಿಸದಸ್ಯ ಪೀಠ ಈ ಅನರ್ಹ ಶಾಸಕ ಸಲ್ಲಿಸಿರುವ ಒಟ್ಟು 9 ರಿಟ್ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದ ಸ್ಪೀಕರ್ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳಿಗೆ ಕೊನೆಗೂ ವಿಚಾರಣೆ ಕಾಲ ಕೂಡಿಬಂದಿದೆ.
ಈ ಮೂಲಕ ಕಳೆದ ಒಂದೂವರೆ ತಿಂಗಳಿನಿಂದ ಸುಪ್ರೀಂಕೋರ್ಟ್ ವಿಚಾರಣೆಗೆ ಕಾಯುತ್ತಿದ್ದ ಅನರ್ಹ ಶಾಸಕರಿಗೆ ಸ್ವಲ್ಪ ನೆಮ್ಮದಿ ಸಿಕ್ಕಂತಾಗಿದೆ.

ಅನರ್ಹ ಶಾಸಕರ ವಾದವೇನು?
ಸ್ಪೀಕರ್ ಅವರು ನಮ್ಮ ಸದಸ್ಯತ್ವವನ್ನು ರದ್ದುಪಡಿಸಿರುವುದು ಸಂಪೂರ್ಣ ಕಾನೂನು ಬಾಹಿರ, ದುರುದ್ದೇಶದ ಮತ್ತು ನಿರಂಕುಶ ಆದೇಶವನ್ನು ಹೊರಡಿಸಿದ್ದಾರೆ. ಪಕ್ಷ ವಿರೋಧಿ ನಡೆಗಾಗಿ ಸದಸ್ಯತ್ವವನ್ನು ರದ್ದು ಪಡಿಸುವ ಸಂವಿಧಾನದ 10ನೇ ಪರಿಚ್ಛೇದವನ್ನು ಅನಾವಶ್ಯಕವಾಗಿ ಸ್ಪೀಕರ್ ಈ ಪ್ರಕರಣದಲ್ಲಿ ಎಳೆದು ತಂದಿದ್ದಾರೆ ಎಂದು ಅರ್ಜಿಯಲ್ಲಿ ದೂರಿದ್ದಾರೆ.

ಎಲ್ಲರೂ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೆವು
ಎಲ್ಲರೂ ಜು.6ರಂದು ಸ್ವ ಇಚ್ಛೆಯಿಂದ , ನೈಜವಾಗಿ ಸ್ಪೀಕರ್ ಕಚೇರಿಗೆ ರಾಜೀನಾಮೆ ಸಲ್ಲಿಸಿದ ಸಂದರ್ಭದಲ್ಲಿ ನಮ್ಮ ಮೇಲೆ ಯಾವುದೇ ಅನರ್ಹತೆಯ ದೂರಿರಲಿಲ್ಲ. ಬಳಿಕ ಜು.12ರಂದು ಅನರ್ಹತೆಯ ದೂರು ಸಲ್ಲಿಸಲಾಗಿತ್ತು ಎಂದು ಜೆಡಿಎಸ್ ಶಾಸಕ ಎಚ್. ವಿಶ್ವನಾಥ್ , ನಾರಾಯಣಗೌಡ, ಗೋಪಾಲಯ್ಯ ಹೇಳಿದ್ದಾರೆ.

ಸುಧಾಕರ್, ಎಂಟಿಬಿ ನಾಗರಾಜ್ ಹೇಳುವುದೇ ಬೇರೆ
ಜು.10ರಂದು ಅನರ್ಹತೆಯ ದೂರು ಸಲ್ಲಿಕೆಯಾಗಿತ್ತು ಎಂದು ಕಾಂಗ್ರೆಸ್ ಶಾಸಕರಾದ ಸುಧಾಕರ್, ಎಂಟಿಬಿ ನಾಗರಾಜ್, ಬಿಸಿ ಪಾಟೀಲ್, ಶಿವರಾಮ್ ಹೆಬ್ಬಾರ್, ರೋಷನ್ ಬೇಗ್, ಪ್ರತಾಪ್ ಗೌಡ ಪಾಟೀಲ್, ಆರ್ ಶಂಕರ್, ಆನಂದ್ ಸಿಂಗ್, ಮುನಿರತ್ನ, ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನಿರಾಸೆ ಮೂಡಿಸಿತ್ತು
ಕರ್ನಾಟಕದ 17 ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನಿರಾಸೆ ಮೂಡಿಸಿದೆ. ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದೂಡಲಾಗುತ್ತಿದೆ.
ಸೆ. 11ರ ಬುಧವಾರ 14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿತ್ತು. ನ್ಯಾಯಮೂರ್ತಿಗಳಾದ ಎನ್. ವಿ. ರಮಣ, ಅಜಯ್ ರಸ್ತೋಗಿ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು.
ಅನರ್ಹ ಶಾಸಕರಿಗೆ ತುಸು ನೆಮ್ಮದಿ ನೀಡಿದ ಸುಪ್ರೀಂಕೋರ್ಟ್ ಆದರೆ, ಮಂಗಳವಾರ ಸಂಜೆ ಪ್ರಕರಣಗಳ ಲಿಸ್ಟ್ ಹಾಕುವಾಗ ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು ಸೆ. 17ಕ್ಕೆ ಮುಂದೂಡಲಾಗಿತ್ತು.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications