8 ತಿಂಗಳ ಶಿಶು ಅತ್ಯಾಚಾರ ಪ್ರಕರಣ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ, ಜನವರಿ 31: ನವದೆಹಲಿಯಲ್ಲಿ 8 ತಿಂಗಳ ಶಿಶುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ನೀಡುವಂತೆ ಹೂಡಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಇಂದು(ಜ.31) ವಿಚಾರಣೆ ನಡೆಯಲಿದೆ.

ಶಿಶುವಿಗೆ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದಕ್ಕಾಗಿ 10 ಲಕ್ಷ ರೂ. ಪರಿಹಾರ ಒದಗಿಸುವಂತೆಯೂ ಈ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ದೆಹಲಿಯ ಶಕುರ್ ಬಸ್ತಿ ಎಂಬಲ್ಲಿ ನಡೆದ ಈ ಹೀನಾಯ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಮಗುವಿನ ಸಂಬಂಧಿಯನ್ನು ಬಂಧಿಸಲಾಗಿದೆ.

SC will hear plea seeking justice for 8 month old rape victim in Delhi

ತಂದೆ-ತಾಯಿ ಇಬ್ಬರೂ ಉದ್ಯೋಗಸ್ಥರಾಗಿರುವುದರಿಂದ ಮಗುವನ್ನು ಸಂಬಂಧಿಯೊಬ್ಬರ ಮನೆಯಲ್ಲಿ ಬಿಟ್ಟು ಹೋಗಿದ್ದರು. ಈ ಸಂದರ್ಭದಲ್ಲಿ ಮಗುವನ್ನು ಜತನದಿಂದ ನೋಡಿಕೊಳ್ಳಬೇಕಾದ ಸಂಬಂಧಿಯೇ ಆ ಪುಟ್ಟ ಕಂದನ ಮೇಲೆ ಅತ್ಯಾಚಾರ ಎಸಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಮಗು ಚಿಂತಾಜನಕ ಸ್ಥಿತಿ ತಲುಪಿತ್ತು.

ದೆಹಲಿಯ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+