ನವದೆಹಲಿಯಲ್ಲಿ ಮಾರ್ಚ್ 31ರ ತನಕ ನಿಷೇಧಾಜ್ಞೆ ಜಾರಿ

ನವದೆಹಲಿ, ಮಾರ್ಚ್ 22 : ದೆಹಲಿ ಸರ್ಕಾರ ಕೊರೊನಾ ಹರಡದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಾರ್ಚ್ 22ರಿಂದ 31ರ ತನಕ ರಾತ್ರಿ 9 ರಿಂದ 12ರ ತನಕ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ.

ಭಾನುವಾರ ದೆಹಲಿ ಸರ್ಕಾರ ಈ ಕುರಿತು ಮಾಹಿತಿ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಹೆಚ್ಚು ಜನರು ಒಂದು ಕಡೆ ಸೇರುವುದುನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಟನೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ದೆಹಲಿಯಲ್ಲಿ ಭಾನುವಾರದಿಂದ ರಾತ್ರಿ 9 ರಿಂದ ಮಧ್ಯರಾತ್ರಿ 12 ಗಂಟೆಯ ತನಕ ಸೆಕ್ಷನ್ 144 ಸಿಆರ್‌ಪಿಸಿ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರಿಂದಾಗಿ 5ಕ್ಕಿಂತ ಹೆಚ್ಚು ಜನರು ಒಂದು ಕಡೆ ಸೇರುವಂತಿಲ್ಲ.

Delhi Government Imposed Section 114 9 pm to 12 midnight

ದೆಹಲಿಯಲ್ಲಿ ಈಗಾಗಲೇ ಕೊರೊನಾ ಸೋಂಕಿನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. ಸೋಂಕು ಹರಡದಂತೆ ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ದೆಹಲಿ ಮೆಟ್ರೋ ರೈಲು ಸೇವೆಯನ್ನು ಮಾರ್ಚ್ 31ರ ತನಕ ರದ್ದುಗೊಳಿಸಲಾಗಿದೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲ್ ಭಾನುವಾರ ಮಧ್ಯಾಹ್ನ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚರ್ಚೆ ನಡೆಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+