ಚುನಾವಣೆ ಲೆಕ್ಕಾಚಾರದಲ್ಲಿ ಮೋದಿ, ಪಕ್ಷದ ಸಂಸದರಿಗೆ ಪ್ರಚಾರದ ಪಾಠ

Posted By:
Subscribe to Oneindia Kannada

ನವದೆಹಲಿ, ಫೆಬ್ರವರಿ 9: "ಕೇಂದ್ರ ಬಜೆಟ್ ನಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಜನರಿಗೆ ತಲುಪಿಸಿ. ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಅದರಿಂದ ನೆರವಾಗುತ್ತದೆ" ಎಂದು ಪ್ರಧಾನಿ ಮೋದಿ ಅವರು ತಮ್ಮ ಪಕ್ಷದ ಸಂಸದರಿಗೆ ಹೇಳಿದ್ದಾರೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ಮಾಹಿತಿ ನೀಡಿದ್ದಾರೆ.

ಚುನಾವಣೆ ಘೋಷಣೆಗೂ ಮೊದಲು ಕರ್ನಾಟಕದಲ್ಲಿ 4 ಮೋದಿ ರ‍್ಯಾಲಿ

ಸಂಸದರೆ ಸಾಧನೆಯು ಪಕ್ಷದ ಪ್ರದರ್ಶನದ ಮೇಲೆ ಅವಲಂಬಿಸಿರುತ್ತದೆ ಎಂದು ಬಿಜೆಪಿ ಸಂಸದೀಯ ಸಭೆಯಲ್ಲಿ ಮೋದಿ ಹೇಳಿದ್ದಾರೆ ನಾಯಕರು ತಿಳಿಸಿದ್ದಾರೆ. ಈ ಸಭೆಯಲ್ಲಿ ಹಾಜರಿದ್ದ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜರಿದಿದ್ದಾರೆ. ಬುಧವಾರ ಸಂಸತ್ ನಲ್ಲಿ ಮೋದಿ ಭಾಷಣಕ್ಕೆ ಅಡ್ಡಪಡಿಸಲು ರಾಹುಲ್ ಕುಮ್ಮಕ್ಕು ನೀಡಿದ್ದಾರೆ ಎಂಬುದು ಆಕ್ರೋಶಕ್ಕೆ ಕಾರಣವಾಗಿದೆ.

Sell Our Budget Among Masses, Narendra Modi tells BJP MPs

ಬಜೆಟ್ ನಲ್ಲಿನ ಜನಪರವಾದ ಯೋಜನೆ ತಿಳಿಸಿ ಎಂದು ಹೇಳಿರುವ ಮೋದಿ, ಕೇಂದ್ರದ ಯೋಜನೆಗಳನ್ನು ಜನರ ಮಧ್ಯೆ ಪ್ರಚಾರ ಮಾಡುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದ್ದಾರೆ. ಇದೇ ವೇಳೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಬಿಜೆಪಿ ಸಾಧನೆಯನ್ನು ಜನರಿಗೆ ಗೊತ್ತು ಮಾಡುವ ಬಗ್ಗೆ ಸಲಹೆ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
PM Narendra Modi on Friday asked BJP MPs to take welfare schemes announced in the union budget to the masses, saying that popularising them would lead to the party winning in the polls.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ