• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ವಿಧಿವಶ

|

ನವದೆಹಲಿ, ನವೆಂಬರ್.25: ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರು ವಿಧಿವಶರಾಗಿದ್ದಾರೆ. ಕೊರೊನಾವೈರಸ್ ಸೋಂಕಿನಿಂದಾಗಿ ಗುರುಗ್ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.

ಗುಜರಾತ್ ನ ರಾಜ್ಯಸಭಾ ಸದಸ್ಯರಾಗಿದ್ದ ಅಹ್ಮದ್ ಪಟೇಲ್ ಅವರಿಗೆ ಬಹುಅಂಗಾಂಗ ವೈಫಲ್ಯ ಸಮಸ್ಯೆಯಿದ್ದು, ಇತ್ತೀಚಿಗೆ ಕೊವಿಡ್-19 ಸೋಂಕು ತಗುಲಿರುವ ಪತ್ತೆ ದೃಢಪಟ್ಟಿತ್ತು. ಈ ಹಿನ್ನೆಲೆ ಗುರುಗ್ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ 3.30ರ ವೇಳೆಗೆ ಮೃತಪಟ್ಟಿರುವ ಬಗ್ಗೆ ಪುತ್ರ ಫೈಜಲ್ ಮಾಹಿತಿ ನೀಡಿದ್ದಾರೆ.

"ನಮ್ಮ ತಂದೆ ಅಹ್ಮದ್ ಪಟೇಲ್ ಅವರು 25/11/2020ರ ಬುಧವಾರ ಬೆಳಗಿನ ಜಾವ 3.30ರ ವೇಳೆ ನಮ್ಮನ್ನೆಲ್ಲ ಅಗಲಿ ಹೋಗಿದ್ದಾರೆ ಎಂದು ತಿಳಿಸುವುದಕ್ಕೆ ವಿಷಾದಿಸುತ್ತೇನೆ. ಕಳೆದ ಒಂದು ತಿಂಗಳ ಹಿಂದೆ ಅವರಿಗೆ ಕೊರೊನಾವೈರಸ್ ತಗುಲಿರುವುದು ದೃಢಪಟ್ಟಿದ್ದು, ಅಂದಿನಿಂದ ಅವರ ಆರೋಗ್ಯ ಬಹಳಷ್ಟು ಹದಗೆಟ್ಟಿತ್ತು. ಅವರ ಆತ್ಮಕ್ಕೆ ಅಲ್ಲಾ ಶಾಂತಿ ನೀಡಲಿ" ಎಂದು ಪುತ್ರ ಫೈಜಲ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಅಹ್ಮದ್ ಪಟೇಲ್ ಸಾವಿಗೆ ಪ್ರಧಾನಿ ಸಂತಾಪ:

   CBIನಿಂದು ಡಿಕೆಶಿಯವರ ಬೆನ್ನು ಬಿದ್ದಿರುವುದು ರಾಜಕೀಯ ಪ್ರೇರಿತ | Oneindia Kannada

   ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರ ಸಾವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಅಹ್ಮದ್ ಪಟೇಲ್ ಅವರ ಸಾವಿನಿಂದ ಬಹಳಷ್ಟು ದುಃಖವಾಗುತ್ತಿದೆ. ಹಲವು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಅವರು ಸಮಾಜಕ್ಕಾಗಿ ಬಹಳಷ್ಟು ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದರಲ್ಲಿ ಅವರ ತೀಕ್ಷ್ಣ ಮನಸ್ಥಿತಿ ಮತ್ತು ಬುದ್ಧಿಚಾತುರ್ಯ ಯಾವಾಗಲೂ ನೆನಪಿನಲ್ಲಿ ಉಳಿಯುವಂತದ್ದಾಗಿದೆ. ಅಹ್ಮದ್ ಪಟೇಲ್ ಜೀ ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

   English summary
   Senior Congress Leader Ahmed Patel Passes Away Due To Covid-19 Complications.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X