ವಿಡಿಯೊ:ಮಾನನಷ್ಟ ಮೊಕದ್ದಮೆ ಪ್ರಕರಣ: ಕೇಜ್ರಿವಾಲ್ ಗೆ ಹಿನ್ನೆಡೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದ್ದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ನವದೆಹಲಿ, ನವೆಂಬರ್, 22: ತಮ್ಮ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ವಜಾಗೊಳಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ಮತ್ತು ಜೇಟ್ಲಿ ಅವರು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ದೆಹಲಿ ಕ್ರಿಕೆಟ್ ಮಂಡಳಿಯಲ್ಲಿ ಅರುಣ್ ಜೇಟ್ಲಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಕೇಜ್ರಿವಾಲ್ ಅವರು ಆರೋಪ ಮಾಡಿದ್ದರು. ಆರೋಪ ಖಂಡಿಸಿ ಜೇಟ್ಲಿ ಅವರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಪ್ರಕರಣವನ್ನು ದಾಖಲಿಸಿದ್ದರು.
ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 19ರಂದು ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಲಯ, "ಜೇಟ್ಲಿ ಅವರ ಆರೋಪ ಯಾವುದೇ ಪೂರ್ವಗ್ರಹ ಪೀಡಿತವಲ್ಲ ಎಂದು ಅಭಿಪ್ರಾಯಪಟ್ಟಿತ್ತು.
ಅಷ್ಟೇ ಅಲ್ಲದೆ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿ ಅರ್ಹತೆಯಿಂದ ಕೂಡಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತ್ತು.
ದೆಹಲಿ ಹೈಕೋರ್ಟ್ ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದೆಹಲಿ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.












Click it and Unblock the Notifications