Breaking: ಕಾಂಗ್ರೆಸ್‌ನಲ್ಲಿ ಮುಂದುವರೆದ ರಾಜೀನಾಮೆ ಪರ್ವ

ನವದೆಹಲಿ, ಆಗಸ್ಟ್ 26: ಮಾಜಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ ಬೆನ್ನಲ್ಲೆ ಜಮ್ಮು ಮತ್ತು ಕಾಶ್ಮೀರದ ಹಲವಾರು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆರ್ ಎಸ್ ಚಿಬ್ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪತ್ರ ಬರೆದಿದ್ದಾರೆ.

Several Congress leaders from Jammu and Kashmir resign

ಮಾಜಿ ಸಚಿವ ಗುಲಾಂ ಮಹಮ್ಮದ್ ಸರೂರಿ, ಮಾಜಿ ಶಾಸಕ ಹಾಜಿ ಅಬ್ದುಲ್ ರಶೀದ್, ಮಾಜಿ ಶಾಸಕ ಮತ್ತು ಮಾಜಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್, ಮಾಜಿ ಶಾಸಕ ಗುಲ್ಜಾರ್ ಅಹ್ಮದ್ ವಾನಿ ಮತ್ತು ಮಾಜಿ ಶಾಸಕ ಚೌಧರಿ ಮೊಹಮ್ಮದ್ ಅಕ್ರಮ್ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Several Congress leaders from Jammu and Kashmir resign

"ನಾವು 5 ಮಾಜಿ ಶಾಸಕರು (ಜಿಎಂ ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್) ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ. ಈಗ ಇಲ್ಲಿ ಪಕ್ಷದ ಅಧ್ಯಕ್ಷರು ಮಾತ್ರ ಏಕಾಂಗಿಯಾಗುತ್ತಾರೆ" ಎಂದು ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕ ಜಿಎಂ ಸರೂರಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+