ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೈಂಗಿಕ ದೌರ್ಜನ್ಯದ ಆರೋಪ, ವಿಚಾರಣೆಗೆ ಹಾಜರಾದ ಗೊಗೊಯ್

|
Google Oneindia Kannada News

ನವದೆಹಲಿ, ಮೇ 02: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಬುಧವಾರ ತನಿಖಾ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾದರು. ವಿಚಾರಣೆಯ ನಂತರ ತನ್ನ ಅಭಿಪ್ರಾಯವನ್ನು ಸಮಿತಿ ಸೀಲ್ ಮಾಡಲಾದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ನ ಪ್ರಧಾನ ಕಾರ್ಯದರ್ಶಿಗೆ ನೀಡಲಿದೆ.

ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ನ್ಯಾ ಎಸ್ ಎ ಬೋಬ್ದೆ, ಇಂದು ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರಿರುವ ತನಿಖಾ ಸಮಿತಿ, ವಿಚಾರಣೆಗೆ ಹಾಜರಾಗುವಂತೆ ಗೊಗೊಯ್ ಅವರಿಗೆ ಮನವಿ ಮಾಡಿತ್ತು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧವೇ ಲೈಂಗಿಕ ಕಿರುಕುಳ ಆರೋಪಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧವೇ ಲೈಂಗಿಕ ಕಿರುಕುಳ ಆರೋಪ

Sexual harassment allegation against CJI: Gogoai apppears before panel

ಸುಪ್ರೀಂಕೋರ್ಟ್‌ನ ಮಾಜಿ ಉದ್ಯೋಗಿಯಾಗಿರುವ ಮಹಿಳೆಯೊಬ್ಬರು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದರು. ಆದರೆ ಈ ಆರೋಪದ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿದ್ದ ರಂಜನ್ ಗೊಗೊಯ್, ತಾವು ತಪ್ಪು ಮಾಡಿಲ್ಲ ಎಂದು ಹೇಳಿದ್ದರು.

ಸಿಜೆಐ ಪ್ರಕರಣದಲ್ಲಿ ನ್ಯಾಯ ಸಿಗುತ್ತದೆ ಅನಿಸುತ್ತಿಲ್ಲ: ಮಹಿಳೆ ಅಳಲುಸಿಜೆಐ ಪ್ರಕರಣದಲ್ಲಿ ನ್ಯಾಯ ಸಿಗುತ್ತದೆ ಅನಿಸುತ್ತಿಲ್ಲ: ಮಹಿಳೆ ಅಳಲು

"ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಬಳಿ ಲೈಂಗಿಕ ಸಹಕಾರದ ಬೇಡಿಕೆ ಇರಿಸಿದ್ದರು. ಅದಕ್ಕೆ ತಾವು ಒಪ್ಪದ ಕಾರಣಕ್ಕೆ ಕೆಲಸದಿಂದ ವಜಾಗೊಳಿಸಲಾಯಿತು. ಮಾತ್ರವಲ್ಲ, ಪೊಲೀಸ್ ಇಲಾಖೆಯಲ್ಲಿದ್ದ ಪತಿ ಮತ್ತು ಅವರ ಸಹೋದರರನ್ನೂ ನೌಕರಿಯಿಂದ ಕಿತ್ತು ಹಾಕಲಾಯಿತು.

ಇದಾದ ಬಳಿಕ ಎರಡು ವರ್ಷದ ಹಿಂದೆ ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಂದ ಹಣ ಪಡೆದುಕೊಂಡಿರುವುದಾಗಿ ಆರೋಪಿಸಿ ದೂರು ದಾಖಲಿಸಿ ಮಾರ್ಚ್‌ ತಿಂಗಳಿನಲ್ಲಿ ಬಂಧಿಸಿ ಹಿಂಸಿಸಲಾಯಿತು" ಎಂದು ಮಹಿಳೆ ಆರೋಪಿಸಿದ್ದರು.

English summary
Sexual harassment allegation: Chief Justice of India, Ranjan Gogoi appeared before probe panel on Wednsday.The Committee may submit its findings to Secretary general of Supreme court in a sealed envolope.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X