ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಶಬನಂನಿಂದ ಮತ್ತೊಮ್ಮೆ ಕ್ಷಮಾದಾನ ಅರ್ಜಿ

|
Google Oneindia Kannada News

ನವದೆಹಲಿ, ಫೆಬ್ರವರಿ 19: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ತನ್ನ ಕುಟುಂಬದ ಏಳು ಮಂದಿ ಕೊಲೆ ಮಾಡಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಶಬನಂ ಇದೀಗ ಕ್ಷಮಾದಾನ ಕೋರಿ ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್‌ಗೆ ಹೊಸ ಅರ್ಜಿ ಸಲ್ಲಿಸಿದ್ದಾರೆ.

ಮಥುರಾ ಜೈಲಿನಲ್ಲಿ ಶಬನಂ ಗಲ್ಲಿಗೇರಿಸಲು ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಶಬನಂ ಈ ಅರ್ಜಿ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯಾನಂತರ ಗಲ್ಲಿಗೇರಲಿರುವ ಮೊದಲ ಮಹಿಳಾ ಕೈದಿ; ಶಬನಂ ಹಿಂದಿನ ಕಥೆಯೇನು?ಸ್ವಾತಂತ್ರ್ಯಾನಂತರ ಗಲ್ಲಿಗೇರಲಿರುವ ಮೊದಲ ಮಹಿಳಾ ಕೈದಿ; ಶಬನಂ ಹಿಂದಿನ ಕಥೆಯೇನು?

2008ರ ಏಪ್ರಿಲ್ 14ರಂದು ಪ್ರಿಯತಮ ಸಲೀಂನೊಂದಿಗೆ ಸೇರಿ ತನ್ನ ಕುಟುಂಬದ ಏಳು ಮಂದಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಬನಂಗೆ ಮರಣ ದಂಡನೆ ಶಿಕ್ಷೆಯಾಗಿತ್ತು. 2010ರಲ್ಲಿ ಈ ಇಬ್ಬರೂ ಸೆಷನ್ ಕೋರ್ಟ್‌ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಕೂಡ ಮರಣದಂಡನೆ ಶಿಕ್ಷೆ ಎತ್ತಿಹಿಡಿದಿತ್ತು. ನಂತರ 2015ರಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಅಲ್ಲಿಯೂ ಇವರಿಗೆ ಸೋಲಾಗಿತ್ತು.

Shabnam First Woman Likely To Be Hanged Filed Mercy Petition

ಈ ಬೆಳವಣಿಗೆ ನಂತರ ಶಬನಂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು. ಅದು ಕೂಡ ಫಲ ನೀಡಲಿಲ್ಲ. ಸ್ವತಂತ್ರ್ಯ ಭಾರತದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಲಿರುವ ಮೊದಲ ಮಹಿಳಾ ಕೈದಿ ಶಬನಂ ಎನ್ನಲಾಗಿತ್ತು. ಉತ್ತರ ಪ್ರದೇಶದ ಮಥುರಾದಲ್ಲಿ ನೇಣುಗಂಬಕ್ಕೆ ಏರುತ್ತಿರುವ ಏಕೈಕ ಮಹಿಳಾ ಕೈದಿ ಕೂಡ ಆಗಿದ್ದರು. 1870ರಲ್ಲಿ, ಬ್ರಿಟಿಷರ ಕಾಲದಲ್ಲಿ ಮಹಿಳೆಯರನ್ನು ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ನೇಣುಗಂಬದ ಕೋಣೆ ನಿರ್ಮಿಸಲಾಗಿತ್ತು. ಸ್ವಾತಂತ್ರ್ಯಾನಂತರ ಇದುವರೆಗೂ ಯಾವ ಮಹಿಳೆಯನ್ನೂ ಗಲ್ಲಿಗೇರಿಸಿರಲಿಲ್ಲ. ಈಚೆಗೆ ಶಬನಂಳನ್ನು ಗಲ್ಲಿಗೇರಿಸಲು ಸಿದ್ಧತೆ ನಡೆಯುತ್ತಿತ್ತು.

ಈ ಬೆನ್ನಲ್ಲೇ ಮತ್ತೊಮ್ಮೆ ಶಬನಂ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾರೆ.

English summary
Shabnam, first woman likely to be hanged in India after Independence for killing 7 family members has filed a fresh mercy petition before Uttar Pradesh Governor
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X