ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ 'ಡರ್ಟಿ ಪೊಲಿಟಿಕ್ಸ್' ನಡೆಸುತ್ತಿದೆಯಾ ಬಿಜೆಪಿ?

|
Google Oneindia Kannada News

Recommended Video

ಅಂಬೇಡ್ಕರ್ ಮೊಮ್ಮಗನ ವಿವಾದಾತ್ಮಕ ಹೇಳಿಕೆ | AMBEDKAR | RAJARATHNA AMBEDKAR | GRANDSON | RSS

ನವದೆಹಲಿ, ಜನವರಿ.27: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಡರ್ಟಿ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ದೆಹಲಿಯ ಶಾಹಿನ್ ಬಾಗ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಇದನ್ನೇ ಇಟ್ಟುಕೊಂಡು ಈ ಭಾಗದ ಶಾಹಿನ್ ಬಾಗ್ ರಸ್ತೆ ಬಂದ್ ಮಾಡಲಾಗಿದೆ.

ಸಿಎಎ ವಿರುದ್ಧ ನಿರ್ಣಯ ಪಾಸ್: ಇದು ಮಮತಾ ಸರ್ಕಾರದ ನಿರ್ಧಾರ ಸಿಎಎ ವಿರುದ್ಧ ನಿರ್ಣಯ ಪಾಸ್: ಇದು ಮಮತಾ ಸರ್ಕಾರದ ನಿರ್ಧಾರ

ವಿಧಾನಸಭಾ ಚುನಾವಣೆಯ ಮರುದಿನ ಎಂದರೆ ಮಾರ್ಚ್.08ರಂದು ಮತದಾನ ನಡೆಯಲಿದ್ದು, ಮಾರ್ಚ್.09ರಂದು ಶಾಹಿನ್ ಬಾಗ್ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ದೆಹಲಿಯಲ್ಲಿ ಬಿಜೆಪಿ ನಾಯಕರು ಡರ್ಟಿ ಪಾಲಿಟಿಕ್ಸ್ ನಡೆಸುತ್ತಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಕೆಂಡ ಕಾರಿದ್ದಾರೆ.

ಜನರ ಪರದಾಟ ನಿಮಗೆ ಅರ್ಥವಾಗುತ್ತಿಲ್ವವೇ ಎಂದ ಸಿಎಂ?

ಜನರ ಪರದಾಟ ನಿಮಗೆ ಅರ್ಥವಾಗುತ್ತಿಲ್ವವೇ ಎಂದ ಸಿಎಂ?

ದೆಹಲಿಯ ಕಲಿಂದ್ ಕುಂಜ್ ಪ್ರದೇಶದಲ್ಲೂ ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಈ ಮಾರ್ಗಕ್ಕೆ ತೆರಳುವ ಶಾಹಿನ್ ಬಾಗ್ ಮಾರ್ಗದ ರಸ್ತೆಯನ್ನು ಬಂದ್ ಮಾಡಲಾಗಿದೆ. ಇದರಿಂದ ವಾಹನ ಸವಾರರು ದಿನನಿತ್ಯ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ದೆಹಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿರುವ ಕೇಂದ್ರ ಗೃಹ ಸಚಿವಾಲಯವು ಈ ಬಗ್ಗೆ ಕ್ರಮ ತೆೆಗೆದುಕೊಳ್ಳುತ್ತಿಲ್ಲವೇಕೆ ಎಂದು ನೇರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿ ಕಾರಿದ್ದಾರೆ.

"ಸುಮ್ಮನೆ ನನ್ನ ವಿರುದ್ಧ ಬೊಟ್ಟು ಮಾಡುವುದನ್ನು ಬಿಡಿ"

ರಾಷ್ಟ್ರ ರಾಜಧಾನಿಯಲ್ಲಿ ಕಾನೂನು-ಸುವ್ಯವಸ್ಥೆಯನ್ನು ಕಾಪಾಡುವ ಹೊಣೆ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ. ಆದರೆ, ಬಿಜೆಪಿ ನಾಯಕರು ಸುಖಾಸುಮ್ಮನೆ ನನ್ನ ವಿರುದ್ಧ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಎಲ್ಲದಕ್ಕೂ ನನ್ನ ಅನುಮತಿ ಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ದಲ್ಲಿ ನಾನು ಈಗಲೇ ಅನುಮತಿ ನೀಡುತ್ತೇನೆ. ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಕಿಡಿ ಕಾರಿದ್ದಾರೆ.

ಶಾಂತಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ಎಂದ ಸಿಎಂ

ಶಾಂತಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ಎಂದ ಸಿಎಂ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಬಿಜೆಪಿ ನಾಯಕರು ಭೇಟಿ ಮಾಡಲಿ. ಇನ್ನೊಂದು ಗಂಟೆಯಲ್ಲೇ ಶಾಂತಿ ಮಾತುಕತೆ ನಡೆಸಿ ಬಂದ್ ಆಗಿರುವ ಶಾಹಿನ್ ಬಾಗ್ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಿ ಎಂದು ಸವಾಲ್ ಹಾಕಿದರು.

ಸಿಎಂ ಕೇಜ್ರಿವಾಲ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆರೋಪ

ಸಿಎಂ ಕೇಜ್ರಿವಾಲ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆರೋಪ

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಡ್ಡಾ, ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಸಿಎಎ ವಿರುದ್ಧದ ಹೋರಾಟಕ್ಕೆ ಸಿಎಂ ಬೆಂಬಲಿಸುವ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

English summary
Citizenship Amendment Act: BJP Leader Doing Dirty Politics In National Capital. Delhi Chief Minister Arvind Kejriwal Attacked On Central Government About Shaheen Bagh Protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X