ದೆಹಲಿ ಮತದಾನ ಮುನ್ನ ದಿನ ಇದೆಲ್ಲಾ ಬೇಕಿತ್ತಾ ಎಂದ ಸುಪ್ರೀಂಕೋರ್ಟ್

ನವದೆಹಲಿ, ಫೆಬ್ರವರಿ.07: ದೆಹಲಿ ವಿಧಾನಸಭಾ ಚುನಾವಣಾ ಮತದಾನಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಫೆಬ್ರವರಿ.08ರ ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಲಿದ್ದು, ಇದಕ್ಕೂ ಮುನ್ನ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾದ ಅರ್ಜಿಯೊಂದು ಸದ್ದು ಮಾಡಿದೆ.

ದೆಹಲಿಯ ಶಾಹಿನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಉಗ್ರ ಹೋರಾಟ ನಡೆಸಲಾಗುತ್ತಿದೆ. ಇದನ್ನು ಪ್ರಶ್ನಿಸಿ ವಕೀಲ ಅಮಿತ್ ಸಹಾನಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ಅರ್ಜಿ ಕುರಿತು ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ನೇತೃತ್ವದ ವಿಭಾಗೀಯ ಪೀಠ ಈ ವಿಚಾರಣೆ ನಡೆಸಿತು. ಮುಂದಿನವಾರ ಅರ್ಜಿ ವಿಚಾರಣೆ ನಡೆಸಿದ ಸಾಕಲ್ಲವೇ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.

ಮುಂದಿನ ವಾರ ಅರ್ಜಿ ವಿಚಾರಣೆ ನಡೆಸಿದರೆ ಸಾಲದೇ?

ಮುಂದಿನ ವಾರ ಅರ್ಜಿ ವಿಚಾರಣೆ ನಡೆಸಿದರೆ ಸಾಲದೇ?

ಫೆಬ್ರವರಿ.08ರ ಶನಿವಾರ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇದರ ಮುನ್ನ ದಿನ ಶಾಹಿನ್ ಬಾಗ್ ಪ್ರತಿಭಟನೆ ವಿರುದ್ಧ ಅರ್ಜಿ ಸಲ್ಲಿಸುವುದರ ಉದ್ದೇಶ ಏನು. ಈಗ ಅರ್ಜಿಯ ತುರ್ತು ವಿಚಾರಣೆಯ ಅಗತ್ಯವಿದೆಯೇ, ಮುಂದಿನ ವಾರ ವಿಚಾರಣೆ ನಡೆಸಿದರೆ ಆಗುವುದಿಲ್ಲವೇ ಎಂದು ಸುಪ್ರೀಂಕೋರ್ಟ್ ಅರ್ಜಿದಾರರನ್ನು ಪ್ರಶ್ನೆ ಮಾಡಿದೆ.

ದೆಹಲಿ ಚುನಾವಣೆ ಮೇಲೆ ಪ್ರಭಾವ ಬೀರದಿರಲಿ

ದೆಹಲಿ ಚುನಾವಣೆ ಮೇಲೆ ಪ್ರಭಾವ ಬೀರದಿರಲಿ

ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರೋಧಿ ಪ್ರತಿಭಟನೆ ದೆಹಲಿ ಮತದಾನದ ಮೇಲೆ ಯಾವುದೇ ರೀತಿ ಪ್ರಭಾವ ಬೀರಕೂಡದು. ಮತದಾನ ಮುಗಿದ ನಂತರದಲ್ಲಿ ಈ ಅರ್ಜಿ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.

ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ ಸುಪ್ರೀಂಕೋರ್ಟ್

ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ ಸುಪ್ರೀಂಕೋರ್ಟ್

ಕೇಂದ್ರ ಸರ್ಕಾರದ ವಿರುದ್ಧ ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಆಗುತ್ತಿರುವ ಸಮಸ್ಯೆಗಳ ಸ್ಪಷ್ಟವಾಗಿ ತಿಳಿಯುತ್ತದೆ. ಸಾರ್ವಜನಿಕರ ತೊಂದರೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ. ಫೆಬ್ರವರಿ.10ರ ಸೋಮವಾರ ಈ ಅರ್ಜಿ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಅರ್ಜಿದಾರರಿಗೆ ತಿಳಿಸಿದೆ.

ಹೈಕೋರ್ಟ್ ನಲ್ಲೇ ಯಾಕೆ ವಿಚಾರಣೆ ಆಗಬಾರದು?

ಹೈಕೋರ್ಟ್ ನಲ್ಲೇ ಯಾಕೆ ವಿಚಾರಣೆ ಆಗಬಾರದು?

ಶಾಹಿನ್ ಬಾಗ್ ಪ್ರತಿಭಟನೆ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಕಾಪರಣವಾದರೂ ಏನು. ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಸಿದರೆ ಆಗುವುದಿಲ್ಲವೇ ಎಂದು ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ. ಹೈಕೋರ್ಟ್ ಈ ಅರ್ಜಿ ವಿಚಾರಣೆಗೆ ಸರಿಯಾದ ವೇದಿಕೆಯಾಗಲಿದ್ದು, ಸುಪ್ರೀಂಕೋರ್ಟ್ ಬೇಕಿದ್ದಲ್ಲಿ ಹೈಕೋರ್ಟ್ ಗೆ ನಿರ್ದೇಶನ ನೀಡಬಹುದಲ್ಲವೇ ಎಂದು ಪ್ರಶ್ನಿಸಿದೆ.

ಶಾಹಿನ್ ಬಾಗ್ ಹೋರಾಟದಿಂದ ಜನರಿಗೆ ಸಂಕಟ

ಶಾಹಿನ್ ಬಾಗ್ ಹೋರಾಟದಿಂದ ಜನರಿಗೆ ಸಂಕಟ

ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ಶಾಹಿನ್ ಬಾಗ್ ನಲ್ಲಿ ಕಳೆದ ಡಿಸೆಂಬರ್.15ರಿಂದರೂ ಉಗ್ರ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ಕಲಿಂದ್ ಕುಂಜ್ ಮತ್ತು ಶಾಹಿನ್ ಬಾಗ್ ನಡುವಿನ ಸಂಪರ್ಕವೇ ಬಂದ್ ಆಗಿದೆ. ಹೀಗಾಗಿ ವಾಹನ ಸವಾರರು ನಿತ್ಯ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಜಿದಾರ ಅಮಿತ್ ಸಹಾನಿ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+