ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶರದ್ ಪವಾರ್-ನರೇಂದ್ರ ಮೋದಿ ಭೇಟಿ: ಮಹಾರಾಷ್ಟ್ರ ಬಿಕ್ಕಟ್ಟಿಗೆ ಅಂತ್ಯ?

|
Google Oneindia Kannada News

ನವದೆಹಲಿ, ನವೆಂಬರ್ 20: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮುಂದುವರೆಯುತ್ತಿರುವ ನಡುವೆಯೇ ಇಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಭೇಟಿ ಆಗುತ್ತಿದ್ದಾರೆ.

ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರ ನಡುವೆಯೇ ಸಂಸತ್‌ನಲ್ಲಿ ಇಂದು ಮಧ್ಯಾಹ್ನ ಶರದ್ ಪವಾರ್ ಅವರು ಮೋದಿ ಅವರನ್ನು ಭೇಟಿ ಆಗಿಲಿದ್ದಾರೆ. ಈ ಸಮಯದಲ್ಲಿ ಮಹಾರಾಷ್ಟ್ರ ರೈತರು ಹಾಗೂ ಪ್ರಸ್ತುತ ರಾಜಕೀಯ ವಿಷಯಗಳ ಬಗ್ಗೆ ಇಬ್ಬರೂ ನಾಯಕರು ಚರ್ಚೆ ಮಾಡಲಿದ್ದಾರೆ.

ಪವಾರ್ ಹೇಳಿದ್ದು ಅರ್ಥ ಮಾಡಿಕೊಳ್ಳಲು ನೂರು ಜನ್ಮ ಬೇಕುಪವಾರ್ ಹೇಳಿದ್ದು ಅರ್ಥ ಮಾಡಿಕೊಳ್ಳಲು ನೂರು ಜನ್ಮ ಬೇಕು

ಬಿಜೆಪಿ, ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್ ನಾಲ್ಕೂ ಪಕ್ಷಗಳಿಗೆ ಬಹುಮತ ಬಂದಿಲ್ಲ ಹಾಗೂ ಶಿವಸೇನಾ-ಬಿಜೆಪಿಯು ಚುನಾವಣಾಪೂರ್ವ ಮಾಡಿಕೊಂಡಿದ್ದ ಮೈತ್ರಿಗೆ ಬಹುತೇಕ ಎಳ್ಳು-ನೀರು ಬಿಟ್ಟಿರುವ ಕಾರಣ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ನಾಲ್ಕೂ ಪಕ್ಷಗಳ ನಡುವೆ ಸೂಕ್ತ ಸಮನ್ವಯ ಸಾಧ್ಯವಾಗುತ್ತಿಲ್ಲ.

Sharad Pawar Meeting Narendra Modi On November 20

ಶಿವಸೇನಾ-ಬಿಜೆಪಿ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡು ಪರಸ್ಪರ ದೂರವಾದ ಬೆನ್ನಲ್ಲೇ ಎನ್‌ಸಿಪಿಯನ್ನು ಕೇಂದ್ರವನ್ನಾಗಿರಿಸಿಕೊಂಡು ಹಲವು ಲೆಕ್ಕಾಚಾರಗಳನ್ನು ಮಾಡಲಾಯಿತು. ಆದರೆ ಶರದ್ ಪವಾರ್ ಅವರು ಶಿವಸೇನಾ ದೊಂದಿಗೆ ಮೈತ್ರಿ ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದರು.

ಸೇನಾಕ್ಕೆ ಸಿಎಂ ಸ್ಥಾನ, ಎನ್ಸಿಪಿ-ಕಾಂಗ್ರೆಸ್ಸಿಗೆ 2 ಡಿಸಿಎಂ ಹೊಸ ಡೀಲ್?ಸೇನಾಕ್ಕೆ ಸಿಎಂ ಸ್ಥಾನ, ಎನ್ಸಿಪಿ-ಕಾಂಗ್ರೆಸ್ಸಿಗೆ 2 ಡಿಸಿಎಂ ಹೊಸ ಡೀಲ್?

ಆದರೆ ಈಗ ಶರದ್ ಪವಾರ್ ಅವರು ಮೋದಿ ಅವರನ್ನು ಭೇಟಿ ಆಗುತ್ತಿರುವುದು ಕುತೂಹಲ ಮೂಡಿಸಿದ್ದು, ಎನ್‌ಸಿಪಿ-ಬಿಜೆಪಿಯ ಮೈತ್ರಿಯ ವಾಸನೆ ಬರುತ್ತಿದೆ. ಆದರೆ ಇದೂ ಸಹ ಕಷ್ಟಸಾಧ್ಯವೆಂದೇ ಹೇಳಲಾಗುತ್ತಿದೆ.

Sharad Pawar Meeting Narendra Modi On November 20

ಬಿಜೆಪಿಯನ್ನು ಮೊಹಮ್ಮದ್ ಘೋರಿಗೆ ಹೋಲಿಸಿದ ಶಿವಸೇನಾಬಿಜೆಪಿಯನ್ನು ಮೊಹಮ್ಮದ್ ಘೋರಿಗೆ ಹೋಲಿಸಿದ ಶಿವಸೇನಾ

ನರೇಂದ್ರ ಮೋದಿ ಅವರು ಚಳಿಗಾಲದ ಅಧಿವೇಶನ ಪ್ರಾರಂಭವಾದ ದಿನ ಸಂಸತ್‌ನಲ್ಲಿ ಶರದ್ ಪವಾರ್ ಅವರ ಎನ್‌ಸಿಪಿ ಪಕ್ಷವನ್ನು ಹೊಗಳಿದ್ದರು. ಇದರ ಬೆನ್ನಲ್ಲೇ ಶರದ್ ಪವಾರ್-ಮೋದಿ ಅವರನ್ನು ಭೇಟಿ ಆಗುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

English summary
NCP leader Sharad Pawar meeting Narendra Modi today. This meeting grab attention because of Maharashtra political crisis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X