• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಷ್ಮಾ ಸ್ವರಾಜ್ ರನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್

|

ನವದೆಹಲಿ, ಅಕ್ಟೋಬರ್ 01: 'ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಡಿದ ಭಾಷಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕುರಿತು ಧನಾತ್ಮಕ ಮನೋಭಾವವನ್ನು ಸೃಷ್ಟಿಸಲು ವಿಫಲವಾಗಿದದೆ' ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ದೂರಿದ್ದಾರೆ.

ಅಮೆರಿಕದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 73ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾನುವಾರ ಮಾತನಾಡಿದ ಸುಷ್ಮಾ ಸ್ವರಾಜ್ ಅವರ ಭಾಷಣವನ್ನು ನವದೆಹಲಿಯಲ್ಲಿ ಶಶಿ ತರೂರ್ ಖಂಡಿಸಿದರು.

ವಿಶ್ವಸಂಸ್ಥೆ: ಉಗ್ರರ ನೆರಳಾಗಿರುವ ಪಾಕ್ ವಿರುದ್ಧ ಸುಷ್ಮಾ ಸ್ವರಾಜ್ ವಾಗ್ದಾಳಿ

"ಸುಷ್ಮಾ ಸ್ವರಾಜ್ ಅವರ ಭಾಷಣ ನರೇಂದ್ರ ಮೋದಿ ಸರ್ಕಾರದ ಪರ ಪ್ರಚಾರದಂತಿತ್ತು. ಈ ಭಾಷಣದಿಂದ ಅವರು ಬಿಜೆಪಿ ಮತದಾರರನ್ನು ಸೆಳೆಯುವ ಯತ್ನ ಮಾಡಿದರೇ ಹೊರತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಮಾಡಲಿಲ್ಲ" ಎಂದು ತರೂರ್ ಆರೋಪಿಸಿದರು.

ಭಯೋತ್ಪಾದನೆ ಮೂಲೋತ್ಪಾಟನೆಗೆ ಜಾಗತಿಕ ವೇದಿಕೆಯಲ್ಲಿ ಸುಷ್ಮಾ ಧ್ವನಿ

ಭಾನುವಾರ ವಿಶ್ವಸಂಸ್ಥೆಯ ಸಾಮಾನ್ಯ ಸಂಬೆಯಲ್ಲಿ ಮಾಡಿದ ತಮ್ಮ ಭಾಷಣದಲ್ಲಿ, ಸುಷ್ಮಾ ಸ್ವರಾಕ್, ಪಾಕಿಸ್ತಾನ ಭಯೋತ್ಪಾದಕರನ್ನು ವೈಭವೀಕರಿಸುತ್ತಿರುವುದನ್ನು ಖಂಡಿಸಿದ್ದರು. ಪಾಕಿಸ್ತಾನ ಭಯೋತ್ಪಾದಕರಿಗೆ ಭದ್ರ ನೆಲೆಯಾಗಿ ಪರಿಣಮಿಸಿದೆ ಎಂದು ದೂರಿದ್ದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದ ತ್ವರಿತ ಅಭಿವೃದ್ಧಿಗೆ ಪರಿಚಯಿಸಿದ ವಿವಿಧ ಯೋಜನೆಗಳನ್ನೂ ಅವರು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದರು.

English summary
Congress leader Shashi Tharoor attacked external affairs minister Sushma Swaraj for her speech in United Nations general assembly. Her address at the international platform failed to construct a positive and constructive image of India in the world, he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X