ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಶಶಿ ತರೂರ್ ಪ್ರಶ್ನೆ

|
Google Oneindia Kannada News

ನವದೆಹಲಿ, ಏಪ್ರಿಲ್ 8: ಔಷಧವನ್ನು ಅಮೆರಿಕಕ್ಕೆ ರಫ್ತು ಮಾಡಲು ಭಾರತ ಸರ್ಕಾರ ಸಮ್ಮತಿ ಸೂಚಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ಕಾಂಗ್ರೆಸ್ ಸಂಸದ ಶಶಿ ತರೂರ್ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

29 ಮಿಲಿಯನ್‌ ಅಷ್ಟು ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಭಾರತವು ಅಮೆರಿಕಕ್ಕೆ ರಫ್ತು ಮಾಡಲು ಒಪ್ಪಿಕೊಂಡಿದೆ. 'ಭಾರತವು ಏನೂ ಯೋಚಿಸದೆ ಈ ನಿರ್ಧಾರಕ್ಕೆ ಬಂದಿದೆ. ಒಂದೊಮ್ಮೆ ಕೊವಿಡ್ 19ಕ್ಕೆ ಅಮೆರಿಕವು ಔಷಧವನ್ನು ಕಂಡು ಹಿಡಿದರೆ ಭಾರತವೇ ಮೊದಲ ಆದ್ಯತೆಯಾಗುವುದೇ ಎಂದು ಪ್ರಶ್ನಿಸಿದ್ದಾರೆ'.

ಭಾರತವು ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧವನ್ನು ಕಳುಹಿಸಲು ಒಪ್ಪಿಗೆ ನೀಡಿದ ಕೆಲವೇ ನಿಮಿಷಗಳಲ್ಲಿ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

Shashi Tharoor Questions To Donald Trump

ಒಂದೊಮ್ಮೆ ಹೈಡ್ರಾಕ್ಸಿಕ್ಲೋರೋಕ್ವಿನ್ ಅಮೆರಿಕಕ್ಕೆ ರಫ್ತು ಮಾಡದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರು ಎನ್ನುವ ಸುದ್ದಿ ಎಲ್ಲೆಡೆ ಹರಡಿತ್ತು.

ಈ ನಗರದಲ್ಲಿ ಇನ್ಮುಂದೆ ಮಾಸ್ಕ್ ಧರಿಸದೇ ಓಡಾಡಿದರೇ ಶಿಕ್ಷಾರ್ಹ ಅಪರಾಧಈ ನಗರದಲ್ಲಿ ಇನ್ಮುಂದೆ ಮಾಸ್ಕ್ ಧರಿಸದೇ ಓಡಾಡಿದರೇ ಶಿಕ್ಷಾರ್ಹ ಅಪರಾಧ

ಯಾವುದೇ ದೇಶದಗಳಿಗೆ ಆ ಔಷಧವನ್ನು ರಫ್ತು ಮಾಡುವುದಿಲ್ಲ ಎಂಬ ನಿರ್ಧಾರವನ್ನು ಮೋದಿ ಮಾಡಿದ್ದಾರೆ ಎಂದರೆ ನಂಬಲಾಗುತ್ತಿಲ್ಲ.

ಇದು ಅವರ ನಿರ್ಧಾರ ಎಂದು ನನಗೆ ಅನಿಸುತ್ತಿಲ್ಲ. ನಾವು ಅವರೊಂದಿಗೆ ಮಾತನಾಡಿದ್ದೇವೆ, ನಮ್ಮ ಮಧ್ಯೆ ಉತ್ತಮ ಬಾಂಧವ್ಯವಿದೆ. ಮೋದಿ ನಮಗೆ ಔಷಧವನ್ನು ರಫ್ತು ಮಾಡಲು ಒಪ್ಪಿದ್ದಕ್ಕೆ ಧನ್ಯವಾದಗಳು ಎಂದು ಟ್ರಂಪ್ ತಿಳಿಸಿದ್ದಾರೆ.

ಭಾರತವು ಶೇ.70 ರಷ್ಟು ವಿಶ್ವಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್‌ನ್ನು ಮಾರಾಟ ಮಾಡುತ್ತದೆ.

English summary
Congress MP Shashi Tharoor told President Donald Trump that India had "selflessly agreed" to the sale and asked if the US would reciprocate by granting India "first priority" in the sharing of any COVID-19 vaccine that may be developed in American laboratories.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X