ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ನೂತನ ಅಧ್ಯಕ್ಷ ಹುದ್ದೆಗೆ ಶಿಂಧೆ ಹೆಸರು ಪ್ರಸ್ತಾಪ

|
Google Oneindia Kannada News

ನವದೆಹಲಿ, ಜು.1: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಹೆಸರು ಮುನ್ನೆಲೆಗೆ ಬಂದಿದೆ.ಗಾಂಧಿ ಕುಟುಂಬದ ಅತ್ಯಾಪ್ತ ಎನಿಸಿಕೊಂಡಿರುವ ಶಿಂಧೆ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ.

ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಹಠ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ನೇಮಕದ ಸಾಧ್ಯತೆ ಇದೆ.

ಸಂಕಷ್ಟದಲ್ಲಿರುವ ಕಾಂಗ್ರೆಸ್‌ನಿಂದ ಎರಡು ಬದಲಾವಣೆ, ಒಂದು ನಿರ್ಣಯ!ಸಂಕಷ್ಟದಲ್ಲಿರುವ ಕಾಂಗ್ರೆಸ್‌ನಿಂದ ಎರಡು ಬದಲಾವಣೆ, ಒಂದು ನಿರ್ಣಯ!

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ಕಾಂಗ್ರೆಸ್ ಮುಖಂಡರಾದ ಗುಲಾಮ್ ನಬಿ ಆಜಾದ್ , ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇತರ ನಾಯಕರ ಹೆಸರು ಕೇಳಿಬಂದಿತ್ತು. ಆದರೆ ಈಗ ಶಿಂಧೆ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ವರದಿಯಾಗಿದೆ.

Shinde may replace Rahul for congress president post

ಮಹಾರಾಷ್ಟ್ರದ ಸೊಲ್ಹಾಪುರ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿರುವ ಶಿಂದೆ ಗಾಂಧಿ ಕುಟುಂಬದ ಅತ್ಯಾಪ್ತರಾಗಿದ್ದಾರೆ. ಯುಪಿಎ ಎರಡನೇ ಸರ್ಕಾರದಲ್ಲಿ ಗೃಹಸಚಿವರಾಗಿದ್ದಾಗ ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಹಿರಿಯ ಕಾಂಗ್ರೆಸ್ಸಿಗರನ್ನು ಬೆಚ್ಚುವಂತೆ ಮಾಡಿದ ರಾಹುಲ್ ನಿರ್ಧಾರಹಿರಿಯ ಕಾಂಗ್ರೆಸ್ಸಿಗರನ್ನು ಬೆಚ್ಚುವಂತೆ ಮಾಡಿದ ರಾಹುಲ್ ನಿರ್ಧಾರ

ಹಿಂದೂ ಭಯೋತ್ಪಾದನೆ ಬಗ್ಗೆ ಲಿಖಿತ ಉತ್ತರ ನೀಡಿ, ವಿವಾದಕ್ಕೆ ಗುರಿಯಾಗಿದ್ದರು. ಆದರೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದಲಿತ ಮುಖಂಡ ಶಿಂಧೆ ಹೆಸರು ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಪ್ರಸ್ತಾಪವಾಗಿದೆ.

English summary
Union former minister Sushil kumar Shinde may replace Rahul Gandhi for Congress President post. As Rahul gandhi adamant on his resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X