ಸಿಎಎ ವಿರುದ್ಧ ಹೋರಾಟ ಮಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕೇ?
ನವದೆಹಲಿ, ಜನವರಿ.27: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿಯನ್ನು ವಿರೋಧಿಸುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಕೇಂದ್ರ ಸಚಿವ ಅನುರಾಗ್ ಠಾಕೋರ್ ವಿವಾದದ ಕಿಡಿ ಹೊತ್ತಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೃಹತ್ ರೋಡ್ ಶೋವನ್ನು ಆಯೋಜನೆ ಮಾಡಿತ್ತು. ಈ ವೇಳೆ ಕಾರ್ಯಕರ್ತರು ಹಾಗೂ ನೆರೆದ ಜನರನ್ನು ಉದ್ದೇಶಿಸಿದ ಮಾತನಾಡಿದ ಸಚಿವ ಅನುರಾಗ್ ಠಾಕೂರ್, ಸಿಎಎ ವಿರೋಧಿಗಳೆಲ್ಲ ದೇಶದ್ರೋಹಿಗಳು ಎಂದು ಹೇಳಿದ್ದಾರೆ.
ದೇಶಾದ್ಯಂತ ಸಿಎಎ ಹಾಗೂ ಎನ್ಆರ್ ಸಿ ವಿರುದ್ಧ ಮೊದಲೇ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ನೀಡಿರುವ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.

"ಸಿಎಎ ವಿರೋಧಿಸುವ ದೇಶದ್ರೋಹಿಗಳನ್ನು ಕೊಲ್ಲಬೇಕು"
ಬಿಜೆಪಿ ರೋಡ್ ಶೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ಪರ ಘೋಷಣೆ ಕೂಗಲಾಯಿತು. ನಂತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಸಿಎಎ ವಿರೋಧಿಸುವವರೆಲ್ಲ ದೇಶದ್ರೋಹಿಗಳು. ಅಂಥ ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.












Click it and Unblock the Notifications