ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾಕ್ಕೆ ಬೆದರಿದ ದೆಹಲಿ; ಶಾಪಿಂಗ್ ಮಾಲ್, ಥಿಯೇಟರ್‌ಗಳು ಬಂದ್!

|
Google Oneindia Kannada News

ನವದೆಹಲಿ, ಮಾರ್ಚ್ 12: ದೆಹಲಿಯಲ್ಲೂ ಕೊರೊನಾ (ಕೋವಿಡ್ 19) ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಅಲ್ಲಿನ ಸರ್ಕಾರ ಗಂಭೀರವಾಗಿದ್ದು, ಮಾರ್ಚ್ 31 ರವರಗೆ ದೆಹಲಿ ಮಾಲ್‌ಗಳನ್ನು, ಚಿತ್ರಮಂದಿರಗಳನ್ನು ಮುಚ್ಚಲು ಆದೇಶಿಸಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಆದೇಶ ಹೊರಡಿಸಿದ್ದಾರೆ. ಮಾರ್ಚ್ 31 ರವೆರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಿಗೆ ಹಾಗೂ ಪ್ರಾಥಮಿಕ ಶಾಲಾ ಪರೀಕ್ಷೆಗಳಿಗೆ ರಜೆ ಘೋಷಣೆಯಾದ ಬೆನ್ನಲ್ಲೇ ದೆಹಲಿ ಸರ್ಕಾರದಿಂದ ಸಿನಿಮಾ ಮಂದಿರಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಸೋಮವಾರ 72ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೊನಾ 'ಅಟ್ಟಹಾಸ': ಕೇರಳ ಟಾಪ್, ಕರ್ನಾಟಕ ಎಷ್ಟು?ಭಾರತದಲ್ಲಿ ಕೊರೊನಾ 'ಅಟ್ಟಹಾಸ': ಕೇರಳ ಟಾಪ್, ಕರ್ನಾಟಕ ಎಷ್ಟು?

ಅರವಿಂದ್ ಕೇಜ್ರಿವಾಲ್ ಕೋವಿಡ್‌ನ್ನು ಮಹಾಮಾರಿ ಎಂದು ಕರೆದಿದ್ದಾರೆ. ದೆಹಲಿಯಲ್ಲಿ ಇದುವರೆಗೆ 6 ಜನರಿಗೆ ಸೋಂಕು ದೃಡಪಟ್ಟಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಸಿನಿಮಾ ಮಂದಿರಗಳನ್ನು ಹಾಗೂ ಶಾಪಿಂಗ್ ಮಾಲ್‌ಗಳನ್ನು ಮುಚ್ಚುವ ನಿರ್ಧಾರದಿಂದ ರಾಷ್ಟ್ರ ರಾಜಧಾನಿ ದೆಹಲಿ ಬಿಕೋ ಎನ್ನಲಿದೆ.

Shopping Malls, Theaters Are Shutdown In Delhi Ahead Of Novel Coronavirus

ಏತನ್ಮದ್ಯೆ ಕೇಂದ್ರ ಸಚಿವರು ಯಾರೂ ವಿದೇಶ ಪ್ರವಾಸ ಕೈಗೊಳ್ಳುವಂತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

English summary
Shopping Malls, Theaters Are Shutdown In Kerala Ahead Of Novel Coronavirus. Delhi government orders. till 31st march.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X