Get Updates
Get notified of breaking news, exclusive insights, and must-see stories!

ದೆಹಲಿಯ ರೋಹಿಣಿ ನ್ಯಾಯಾಲಯದ ಹೊರಗೆ ಮತ್ತೆ ಗುಂಡಿನ ದಾಳಿ: ಇಬ್ಬರಿಗೆ ಗಾಯ

ದೆಹಲಿ ಏಪ್ರಿಲ್ 22: ರೋಹಣಿ ನ್ಯಾಯಾಲಯದ ಆವರಣದಲ್ಲೇ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಮೇಲೆ ಗುಂಡಿನ ದಾಳಿ ನಡೆಸಿ ಕೊಂದಿರುವ ಘಟನೆ ನಡೆದು ಒಂದು ವರ್ಷದ ಬಳಿಕ ಇಂದು ಮತ್ತೆ ರೋಹಿಣಿ ನ್ಯಾಯಾಲಯದ ಹೊರಗೆ ಗುಂಡಿನ ಸದ್ದು ಕೇಳಿ ಬಂದಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಭದ್ರತಾ ಸಿಬ್ಬಂದಿ ಮತ್ತು ವಕೀಲರು ನ್ಯಾಯಾಲಯದ ಹೊರಗೆ ವಾದದಲ್ಲಿ ತೊಡಗಿದ ವೇಳೆ ಘಟನೆ ಸಂಭವಿಸಿದೆ. ಮಾತಿನ ಚಕಮಕಿಯ ನಡುವೆ, ಆವರಣದಲ್ಲಿ ನಿಯೋಜಿಸಲಾಗಿದ್ದ ಪೋಲೀಸರು ಗುಂಡು ಹಾರಿಸಿದರು. ಆದರೆ ಬುಲೆಟ್ ನೆಲಕ್ಕೆ ಅಪ್ಪಳಿಸಿತು. ಘಟನೆಯಲ್ಲಿ ಇಬ್ಬರು ವಕೀಲರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾವ ಸಂದರ್ಭಗಳಲ್ಲಿ ಗುಂಡು ಹಾರಿಸಲಾಗಿದೆ ಎಂಬುದನ್ನು ಅವರು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆಕಸ್ಮಿಕವಾಗಿ ಗುಂಡು ಹಾರಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shot fired outside Rohini court in Delhi, 2 injured

ಕಳೆದ ವರ್ಷ ಸೆಪ್ಟೆಂಬರ್ 24ರಂದು ದೆಹಲಿಯ ರೋಹಣಿ ನ್ಯಾಯಾಲಯದ ಆವರಣದಲ್ಲೇ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಮೇಲೆ ಗುಂಡಿನ ದಾಳಿ ನಡೆಸಿ ಕೊಂದಿರುವ ಘಟನೆ ನಡೆದಿದೆ. ಜಿತೇಂದರ್ ಮೇಲೆ ದಾಳಿ ನಡೆಸಿದವರನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದು ಆಗಿದೆ. ಈ ಒಂದೇ ಒಂದು ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವುದು ಭದ್ರತಾ ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಾಗಿತ್ತು.

Shot fired outside Rohini court in Delhi, 2 injured

"ಮೊದಲು ವಕೀಲರ ಸಮವಸ್ತ್ರದಲ್ಲಿ ಆಗಮಿಸಿದ್ದ ಇಬ್ಬರು ದಾಳಿಕೋರರು ನ್ಯಾಯಾಲಯದಲ್ಲಿ ಗೋಗಿ ಮೇಲೆ ಗುಂಡಿನ ದಾಳಿ ನಡೆಸಿದರು. ನಂತರ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ದಾಳಿಕೋರರನ್ನು ಹೊಡೆದು ಉರುಳಿಸಲಾಗಿದೆ" ಎಂದು ರೋಹಿಣಿ ಡಿಸಿಪಿ ಪ್ರಣವ್ ತಾಯಲ್ ಹೇಳಿದ್ದಾರೆ. ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನಾ ಅವರು 'ಟಿಲ್ಲು' ಗ್ಯಾಂಗ್‌ಗೆ ಸೇರಿದ ಕೊಲೆಗಾರರನ್ನು ಅಧಿಕಾರಿಗಳು "ಕೊಂದಿದ್ದಾರೆ" ಎಂದು ಹೇಳಿದರು. ಇದು "ಗ್ಯಾಂಗ್ ವಾರ್ ಅಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+