ಹೈಕಮಾಂಡ್ ಗೆ ನಯಾಪೈಸೆ ಯಾರೂ ಕೊಟ್ಟಿಲ್ಲ: ಸಿದ್ದರಾಮಯ್ಯ

ನವದೆಹಲಿ, ಸೆಪ್ಟೆಂಬರ್ 19: ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವ ಡಿಕೆ ಶಿವಕುಮಾರ್ ಹಾಗ ಇತರರು ಕೋಟಿಗಟ್ಟಲೆ ಹಣ ಕೊಟ್ಟಿದ್ದಾರೆ ಎನ್ನುವುದು ಶುದ್ಧ ಸುಳ್ಳು, ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನು ಹೇಳಲು ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಸಂಬಿತ್ ಪಾತ್ರಾ ಆರೋಪ ಮಾಡಿರುವಂತೆ ಹೈಕಮಾಂಡ್ ಗೆ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯಾವುದೇ ನಾಯಕರಿಗೆ ಯಾವುದೇ ಸಚಿವರು ಹಾಗೂ ಮುಖಂಡರು ಹಣ ಸರಬರಾಜು ಮಾಡಿಲ್ಲ, ಇಂತಹ ಸುಳ್ಳುಗಳನ್ನು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ನಾನು ಡಿಕೆ ಶಿವಕುಮಾರ್ ಜೊತೆ ಮಾತನಾಡಿದ್ದು, ಇದೊಂದು ಶುದ್ಧ ಸುಳ್ಳು, ಕಾನೂನು ಪ್ರಕಾರ ಏನೇನು ಆಗಬೇಕೋ ಅದು ಆಗುತ್ತದೆ ಎಂದು ಸಮರ್ಥಿಸಿಕೊಂಡರು.

Siddaramaiah denies money supply to Partys High command

ಇದೇ ವೇಳೆ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಜೊತೆ ಮಾತುಕತೆ ನಡೆಸಿದ್ದು ಅಪೂರ್ಣವಾಗಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+