ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಸಿದ್ದರಾಮಯ್ಯ: ಕೈ ಅಭ್ಯರ್ಥಿಗಳ ಪಟ್ಟಿ ಕುರಿತು ಅಂತಿಮ ಚರ್ಚೆ

|
Google Oneindia Kannada News

ನವದೆಹಲಿ, ಮಾರ್ಚ್‌ 22: ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಿದ್ದು, ಲೋಕಸಭೆ ಚುನಾವಣೆ ಕರ್ನಾಟಕ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆಯೇ ದೆಹಲಿಗೆ ತೆರಳಿದ್ದು, ಈಗಾಗಲೇ ಒಂದು ಹಂತದ ಮಾತುಕತೆ ಮುಗಿಸಿ ಅಂತಿಮ ಹಂತದ ಮಾತುಕತೆ ನಡೆಸಲು ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಹಠ ಕಾಂಗ್ರೆಸ್- ಜೆಡಿಎಸ್ ನ ಆಟ ಕೆಡಿಸಿದ್ದು ಹೇಗೆ?ಸಿದ್ದರಾಮಯ್ಯ ಹಠ ಕಾಂಗ್ರೆಸ್- ಜೆಡಿಎಸ್ ನ ಆಟ ಕೆಡಿಸಿದ್ದು ಹೇಗೆ?

ಇಂದೇ ಪಟ್ಟಿ ಅಂತಿಮಗೊಳಿಸಲಾಗುತ್ತಿದ್ದು, ಇಂದು ರಾತ್ರಿಯೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹೊರ ಬೀಳುವ ಎಲ್ಲ ಸಾಧ್ಯತೆಗೂ ಇವೆ. ಸಿದ್ದರಾಮಯ್ಯ ಅವರ ಜೊತೆಗೆ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಹಾಗೂ ಇನ್ನೂ ಕೆಲವು ಕೆಪಿಸಿಸಿಯ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ.

Siddaramaiah is in New Delhi, discussing congress candidate list

ಸಿದ್ದರಾಮಯ್ಯ ಅವರ ಜೊತೆಗೆ ಜಮೀರ್ ಅಹ್ಮದ್ ಸಹ ದೆಹಲಿಗೆ ತೆರಳಿದ್ದು, ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಅವರೂ ಸಹ ಚರ್ಚೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಹೈಕಮಾಂಡ್‌ನಿಂದ ತುರ್ತು ಕರೆ : ದೆಹಲಿಗೆ ತೆರಳಿದ ಸಿದ್ದರಾಮಯ್ಯ ಹೈಕಮಾಂಡ್‌ನಿಂದ ತುರ್ತು ಕರೆ : ದೆಹಲಿಗೆ ತೆರಳಿದ ಸಿದ್ದರಾಮಯ್ಯ

ಕಾಂಗ್ರೆಸ್‌ ಪಟ್ಟಿಯಲ್ಲಿ ಕೆಲವು ಅಚ್ಚರಿಗಳಿದ್ದು, ಈಶ್ವರ್ ಖಂಡ್ರೆ, ಶಾಮನೂರು ಶಿವಶಂಕರಪ್ಪ ಅಥವಾ ಎಸ್‌.ಎಸ್.ಮಲ್ಲಿಕಾರ್ಜುನ್‌, ರಿಜ್ವಾನ್ ಅರ್ಷದ್, ಗೋವಿಂದರಾಜು ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂಬ ಸುದ್ದಿ ಇದೆ.

English summary
Siddaramaiah is in New Delhi meeting congress high command to discuss about Karnataka congress candidate for lok sabha elections 2019. Congress may announce candidates list today night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X