ಸದಾನಂದ ಗೌಡರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ, ಜೂ. 4 : ನವದೆಹಲಿ ಪ್ರವಾಸಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಸಿಎಂ ಮನವಿಗೆ ಸ್ಪಂದಿಸಿರುವ ಸದಾನಂದ ಗೌಡರು ರಾಜ್ಯಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದ್ದಾರೆ.

ಬುಧವಾರ ನವದೆಹಲಿಯ ರೈಲ್ವೆ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ರಾಜ್ಯದ ರೈಲ್ವೆ ಯೋಜನೆ ಬಗ್ಗೆ ಮಾತುಕತೆ ನಡೆಸಿದ ಅವರು, ನೀವು ಕರ್ನಾಟಕದವರಾದ್ದರಿಂದ ರಾಜ್ಯದ ರೈಲು ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಮನವಿ ಸಲ್ಲಿಸಿದರು. [ನರೇಂದ್ರ ಮೋದಿ ಭೇಟಿಯಾದ ಸಿದ್ದರಾಮಯ್ಯ]

ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಚಿತ್ರದುರ್ಗದ ಕ್ಷೇತ್ರದ ಸಂಸದ ಚಂದ್ರಪ್ಪ, ಚಾಮರಾಜನಗರ ಕ್ಷೇತ್ರದ ಸಂಸದ ಧ್ರುವನಾರಾಯಣ, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರಗಳಲ್ಲಿ ನೋಡಿ ಉಭಯ ನಾಯಕರ ಭೇಟಿ

ಸದಾನಂದ ಗೌಡರಿಗೆ ಅಭಿನಂದನೆ ಸಲ್ಲಿಸಿದ ಸಿಎಂ

ಸದಾನಂದ ಗೌಡರಿಗೆ ಅಭಿನಂದನೆ ಸಲ್ಲಿಸಿದ ಸಿಎಂ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ಬುಧವಾರ ನೂತನ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ರಾಜ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ

ರಾಜ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ

ಬುಧವಾರ ನವದೆಹಲಿಯ ರೈಲ್ವೆ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ವಿ.ಸದಾನಂದ ಗೌಡರನ್ನು ಭೇಟಿ ರಾಜ್ಯದ ರೈಲ್ವೆ ಯೋಜನೆ ಬಗ್ಗೆ ಮಾತುಕತೆ ನಡೆಸಿದರು. ನೀವು ಕರ್ನಾಟಕದವರಾದ್ದರಿಂದ ರಾಜ್ಯದ ರೈಲು ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಮನವಿ ಸಲ್ಲಿಸಿದರು.

ಅಭಿನಂದನೆ ಸಲ್ಲಿಸಲು ಬಂದಿದ್ದೆ

ಅಭಿನಂದನೆ ಸಲ್ಲಿಸಲು ಬಂದಿದ್ದೆ

ಇಂದು ಕೇವಲ ಸದಾನಂದ ಗೌಡರಿಗೆ ಅಭಿನಂದನೆ ಸಲ್ಲಿಸಲು ಆಗಮಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ರಾಜ್ಯದವರು ಕೇಂದ್ರದ ರೈಲ್ವೆ ಸಚಿವರಾಗಿರುವುದು ನಮಗೆ ಹೆಮ್ಮೆಯ ವಿಚಾರ ಎಂದು ಅವರು ಹೇಳಿದರು.

ಅನುದಾನವನ್ನು ನೀವು ನೀಡಿ

ಅನುದಾನವನ್ನು ನೀವು ನೀಡಿ

ರಾಜ್ಯದ ರೈಲು ಯೋಜನೆಗಳಿಗೆ ಕೇಂದ್ರ ಸರ್ಕಾರ ಶೇ 50 ರಷ್ಟು ಅನುದಾನ ನೀಡಿದರೆ, ಭೂಮಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಿದ್ಧವಿರುವುದಾಗಿ ಸಿದ್ದರಾಮಯ್ಯ ಭೇಟಿಯ ವೇಳೆ ಸದಾನಂದ ಗೌಡರಿಗೆ ತಿಳಿಸಿದ್ದಾರೆ.

ಮನವಿಗೆ ಸ್ಪಂದಿಸಿದ ಸದಾನಂದ ಗೌಡರು

ಮನವಿಗೆ ಸ್ಪಂದಿಸಿದ ಸದಾನಂದ ಗೌಡರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವಿಗೆ ಸ್ಪಂದಿಸಿದ ಡಿ.ವಿ.ಸದಾನಂದ ಗೌಡರು, ರಾಜ್ಯದ ರೈಲು ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತೇನೆ, ರಾಜ್ಯದ ರೈಲು ಯೋಜನೆಗಳ ಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸಿ, ಬಜೆಟ್ ನಲ್ಲಿ ಅಗತ್ಯ ಅನುದಾನ ನೀಡಲು ಪ್ರಯತ್ನ ನಡೆಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸಂಸದರಿಂದಲೂ ಅಭಿನಂದನೆ

ಸಂಸದರಿಂದಲೂ ಅಭಿನಂದನೆ

ಚಿತ್ರದುರ್ಗ ಕ್ಷೇತ್ರದ ಸಂಸದ ಬಿ.ಎನ್.ಚಂದ್ರಪ್ಪ, ಚಾಮರಾಜನಗರ ಕ್ಷೇತ್ರದ ಸಂಸದ ಧ್ರುವನಾರಾಯಣ ಮುಂತಾದವರು ಸಿಎಂ ಸಿದ್ದರಾಮಯ್ಯ ಅವರ ಜೊತೆ ತೆರಳಿ ಸದಾನಂದ ಗೌಡರಿಗೆ ಅಭಿನಂದನೆ ಸಲ್ಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+