ಇಂದು ಸಿದ್ದರಾಮಯ್ಯ-ರಾಹುಲ್ ಭೇಟಿ: ಮಹತ್ವದ ಮಾತುಕತೆ ಸಾಧ್ಯತೆ
Recommended Video

ನವದೆಹಲಿ, ಸೆಪ್ಟೆಂಬರ್ 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಲಿದ್ದು, ರಾಜ್ಯದ ರಾಜಕೀಯ ಬೆಳವಣಿಗೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಯುರೋಪ್ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ವಾಪಸ್ಸಾಗುತ್ತಲೇ ಸೆ.16 ರಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ರಾಹುಲ್ ಭೇಟಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದರು.
ಸಮ್ಮಿಶ್ರ ಸರ್ಕಾರದ ವಿರುದ್ಧ ಜಾರಕಿಹೊಳಿ ಸಹೋದರರು ಬಂಡಾಯ ಎದ್ದಿರುವುದು, ಸಿದ್ದರಾಮಯ್ಯ ಅವರ ಸಂಧಾನವೂ ವಿಫಲವಾಗಿದ್ದು ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ವಾರಗಳಲ್ಲಿ ನಡೆದ ಎಲ್ಲಾ ನಾಟಕೀಯ ಬೆಳವಣಿಗೆಯ ಬಗ್ಗೆಯೂ ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ.

2019 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ಸಮಸ್ಯೆಯನ್ನು ನಾಜೂಕಾಗಿ ನಿಭಾಯಿಸುವಂತೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡುವ ಸಾಧ್ಯತೆ ಇದೆ.












Click it and Unblock the Notifications