ದೆಹಲಿಯಲ್ಲಿ 87 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ: ತನಿಖೆಗಾಗಿ ಎಸ್‌ಐಟಿ ರಚನೆ
ನವದೆಹಲಿ ಫೆಬ್ರವರಿ 15: ಫೋನ್ ಕದಿಯಲು ಬಂದು ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿಯ ತಿಲಕ್ ನಗರದ ಮನೆಯಲ್ಲಿ 87 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿರುವುದಾಗಿ ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿಲಕ್ ನಗರದ ಮನೆಯೊಂದರಿಂದ ಮೊಬೈಲ್ ಫೋನ್ ಕಳ್ಳತನದ ಲಿಖಿತ ದೂರು ಭಾನುವಾರ ಹಿರಿಯ ನಾಗರಿಕರೊಬ್ಬರ ಮಗಳಿಂದ ಬಂದಿದ್ದು, ನಂತರ ಎಫ್ಐಆರ್ ದಾಖಲಿಸಲಾಗಿದೆ. ಜೊತೆಗೆ ಕಳ್ಳತನ ನಡೆದ ಮನೆಯ ಹಿರಿಯ ನಾಗರಿಕರ ಮೇಲೂ ಅತ್ಯಾಚಾರವೆಸಗಲಾಗಿದೆ ಎಂದು ದೂರುದಾರರು ಸೋಮವಾರ ವರದಿ ಮಾಡಿದ್ದಾರೆ.
"ಇಂದು ದೂರುದಾರರಿಂದ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುತ್ತಿದೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಮತ್ತು 376 (ಅತ್ಯಾಚಾರಕ್ಕೆ ಶಿಕ್ಷೆ) ಸೆಕ್ಸನ್ ಅಡಯಲ್ಲಿ ಪ್ರಕರಣ ದಾಖಲಿಸಿಲಾಗಿದೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ನೀಡಲಾಗುತ್ತಿತ್ತು'ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ಘಟನೆಯನ್ನು ಗಮನಿಸಿದೆ ಮತ್ತು ಇದನ್ನು ಬಹಳ ಗಂಭೀರ ವಿಷಯ ಎಂದಿದೆ.
ದೆಹಲಿಯ ಮಸೀದಿಯೊಳಗೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಮೌಲ್ವಿ ಬಂಧನ
ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಪ್ರಕರಣದಲ್ಲಿ ದಾಖಲಾದ ಎಫ್‌ಐಆರ್‌ನ ಪ್ರತಿಯನ್ನು ಸಲ್ಲಿಸಲು ಪೊಲೀಸರನ್ನು ಕೇಳಿಕೊಂಡಿದ್ದಾರೆ. ಆರೋಪಿಗಳ ವಿವರಗಳು ಮತ್ತು ಈ ವಿಷಯದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಗಳು ಮತ್ತು ಈ ವಿಷಯದಲ್ಲಿ ವಿವರವಾದ ಕ್ರಮದ ವರದಿಯನ್ನು ಕೇಳಿದ್ದಾರೆ. "ಈ ಪ್ರಕರಣದಲ್ಲಿ ಯಾವುದೇ ಆರೋಪಿಯನ್ನು ಬಂಧಿಸಿಲ್ಲದಿದ್ದರೆ, ದಯವಿಟ್ಟು ಅದಕ್ಕೆ ಕಾರಣವನ್ನು ಒದಗಿಸಿ. ಈ ವಿಷಯದಲ್ಲಿ ತೆಗೆದುಕೊಂಡ ವಿವರವನ್ನು ನೀಡಿ" ಎಂದು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ವಿಷಯದ ಗಂಭೀರತೆಯನ್ನು ಪರಿಗಣಿಸಿ, ಫೆಬ್ರವರಿ 17 ರೊಳಗೆ ಈ ಮಾಹಿತಿಯನ್ನು ಸಲ್ಲಿಸುವಂತೆ ಪೊಲೀಸರಿಗೆ ತಿಳಿಸಲಾಗಿದೆ.

ದೆಹಲಿ ಪೊಲೀಸರು ಸಂಗ್ರಹಿಸಿದ ಮಾಹಿತಿಯ ಪ್ರಕಾರ, ನಗರದಲ್ಲಿ ಅಕ್ಟೋಬರ್ 31, 2021 ರವರೆಗೆ 1,725 ಮಹಿಳೆಯರ ಮೇಲೆ ಅತ್ಯಾಚಾರವೆಸಗಲಾಗಿದೆ. 2020 ರಲ್ಲಿ ಅದೇ ಅವಧಿಯಲ್ಲಿ 1,429 ಮಹಿಳೆಯರು ಘೋರ ಅಪರಾಧವನ್ನು ಎದುರಿಸಬೇಕಾಗಿದೆ. 2020 ರ ಡೇಟಾವನ್ನು ಹೋಲಿಸಿದರೆ, 2021 ರಲ್ಲಿ ಅಪರಾಧಗಳ ದರದಲ್ಲಿ ಶೇಕಡಾ 20 ರಷ್ಟು ಹೆಚ್ಚಳವಾಗಿದೆ. 2020 ರಲ್ಲಿ ಮಹಿಳೆಯರ ವಿರುದ್ಧದ ಒಟ್ಟು ಅಪರಾಧಗಳ ಸಂಖ್ಯೆ 7,948 ರಷ್ಟಿತ್ತು, ಇದು 2021 ರಲ್ಲಿ 11,527 ಕ್ಕೆ ಏರಿಕೆಯಾಗಿದೆ. ಒಟ್ಟಾರೆಯಾಗಿ, 2021 ರ ಮೊದಲ 10 ತಿಂಗಳುಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧವು ಶೇಕಡಾ 45 ರಷ್ಟು ಹೆಚ್ಚಾಗಿದೆ.
ಭಾರತದಲ್ಲಿ ದಿನವೊಂದಕ್ಕೆ ಸರಾಸರಿ 87 ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಎಂದು ಸರ್ಕಾರ ವರದಿಯನ್ನು ನೀಡಿದೆ. ಇನ್ನು ಈ ಪ್ರಕರಣಗಳಲ್ಲಿ ಹೆಚ್ಚಿನವು ಮಹಿಳೆಯ ಗಂಡ ಅಥವಾ ಅವರ ಸಂಬಂಧಿಕರ ಕ್ರೌರ್ಯ (ಶೇ.30.9) ನಡೆದಿವೆ. ಮಹಿಳೆಯರ ಮೇಲಿನ ಆಕ್ರೋಶದಿಂದ (ಶೇ.21.8)ಹಲ್ಲೆ ನಡೆಸಲಾಗಿದೆ, ಮಹಿಳೆಯರ ಅಪಹರಣ (ಶೇ17.9) ನಡೆದಿದೆ ಎಂದು ಎನ್‌ಸಿಆರ್‌ಬಿ ದಾಖಲೆ ತಿಳಿಸಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications