• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸ್ಸಾಂನಲ್ಲಿ ಭದ್ರತಾ ಪಡೆ ಗುಂಡೇಟಿಗೆ 6 ಡಿಎನ್ಎಲ್ಎ ಉಗ್ರರ ಸಾವು

|
Google Oneindia Kannada News

ನವದೆಹಲಿ, ಮೇ 23: ಅಸ್ಸಾಂ ಮತ್ತು ನಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ದಿಮಸಾ ನ್ಯಾಷನಲ್ ಲಿಬರೇಷನ್ ಆರ್ಮಿ(ಡಿಎನ್ಎಲ್ಎ) ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಡಿಎನ್ಎಲ್ಎ ಸಂಘಟನೆಯ 6 ಉಗ್ರರು ಮೃತಪಟ್ಟಿದ್ದಾರೆ.

ಅಸ್ಸಾಂ ರೈಫಲ್ಸ್ ಪರ್ಸನಲ್ ಮತ್ತು ಪೊಲೀಸರು ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೋವಲಾ ತಿಳಿಸಿದ್ದಾರೆ.

ಪುಲ್ವಾಮದಲ್ಲಿ ಎನ್ ಕೌಂಟರ್: ಸೇನೆಯ ದಾಳಿಗೆ ಮೂವರು ಉಗ್ರರು ಹತಪುಲ್ವಾಮದಲ್ಲಿ ಎನ್ ಕೌಂಟರ್: ಸೇನೆಯ ದಾಳಿಗೆ ಮೂವರು ಉಗ್ರರು ಹತ

ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಮಿಚಿಬೈಲಂಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆ ಸಿಬ್ಬಂದಿ ನಡೆಸಿರುವ ಪ್ರತಿದಾಳಿಯಲ್ಲಿ ಡಿಎನ್ಎಲ್ಎ ಸಂಘಟನೆಯ ಆರು ಉಗ್ರರು ಪ್ರಾಣ ಬಿಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಅಸ್ಸಾಂನ ಮಿಚಿಬೈಲಂಗ್ ಪ್ರದೇಶದಲ್ಲಿ ಕಾರ್ಯಾಚರಣೆ:

ದಿಮಸಾ ನ್ಯಾಷನಲ್ ಲಿಬರೇಷನ್ ಆರ್ಮಿಗೆ ಸೇರಿದ ಮೃತ ಆರು ಉಗ್ರರ ಬಳಿಯಿದ್ದ ನಾಲ್ಕು ಎಕೆ-47 ರೈಫಲ್ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಮಿಚಿಬೈಲಂಗ್ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಅನುಮಾನ ವ್ಯಕ್ತವಾಗಿದ್ದು, ಸೇನಾ ಕಾರ್ಯಾರಣೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

English summary
Six DNLA Militants Killed In Encounter With Security Personnel In Assam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X