ದೆಹಲಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ನವದೆಹಲಿ, ಆಗಸ್ಟ್ 28: ನೈಋತ್ಯ ದೆಹಲಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಆರು ವರ್ಷದ ಬಾಲಕಿಯೊಬ್ಬಳ ಮೇಲೆ ಕ್ಯಾಬ್ ಚಾಲಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಬಾಲಕಿಯ ಪೋಷಕರು ಸೋಮವಾರ ದೂರು ನೀಡಿದ್ದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಯಂತ್ರಣ ಕಾಯ್ದೆ, ಪೋಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ದೇವೇಂದ್ರ ಆರ್ಯ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕನನ್ನು ಬಂಧಿಸಲಾಗಿದೆ ಎಂದೂ ಆರ್ಯ ಹೇಳಿದ್ದಾರೆ.

ಕಳೆದ ತಿಂಗಳಷ್ಟೇ ದೆಹಲಿಯ ಮಹಾನಗರ ಪಾಲಿಕೆ ಶಾಲೆಯಲ್ಲಿ ಏಳು ವರ್ಷದ ಬಾಲಕಿ ಮೇಲೆ ಎಲೆಕ್ಟ್ರಿಶಿಯನ್ ಅತ್ಯಾಚಾರ ನಡೆಸಿದ್ದ. ಈ ಘಟನೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

Six years old girl asexually assaulted in Delhi

ದೇಶದಲ್ಲಿ ದಿನದಿಂದ ದಿನಕ್ಕೆ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ, ಶಾಲೆಯಲ್ಲಿ ಶಿಕ್ಷಕರಿಂದ, ರಸ್ತೆಯಲ್ಲಿ ಕ್ಯಾಬ್ ಡ್ರೈವರ್ ಗಳಿಂದ ಇನ್ನು ಕೆಲವು ತಂದೆಯಿಂದ ಅತ್ಯಾಚಾರಕ್ಕೆ ಒಳಗಾಗಿರುವ ಪ್ರಕರಣವನ್ನು ನೋಡಿದ್ದೇವೆ.

ಎಲ್ಲಿಂದ ಎಲ್ಲಿಯವರೆಗೆ ಹೋದರೂ ಹೆಣ್ಣುಮಕ್ಕಳಿಗೆ ಸರಿಯಾದ ರಕ್ಷಣೆ ಇಲ್ಲದಿರುವುದು ಗೋಚರಿಸುತ್ತದೆ. ಶಾಲಾ ವಾಹನಗಳಲ್ಲಿ ಚಾಲಕನನ್ನು ನಂಬಿ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುತ್ತಾರೆ ಆದರೆ ಆತನಿಂದೇ ಇಂತಹ ಕೃತ್ಯಗಳು ನಡೆದಾಗ ಯಾರನ್ನು ನಂಬಬೇಕು ಯಾರನ್ನು ಬಿಡಬೇಕು ಎನ್ನುವ ಗೊಂದಲ ಉಂಟಾಗುತ್ತದೆ. ಶಾಲಾ ವಾಹನದಲ್ಲಿ ಕಡ್ಡಾಯವಾಗಿ ಭದ್ರತಾ ಸಿಬ್ಬಂದಿಯೊಬ್ಬರನ್ನು ಕಳುಹಿಸಬೇಕು ಎನ್ನುವ ಕಾನೂನಿದೆ ಆದರೆ ಈ ಶಾಲೆ ಪಾಲಿಸಿಲ್ಲ ಎನ್ನುವುದು ಸಾಬೀತಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+