ಚಿನ್ನ ಕಳ್ಳ ಸಾಗಣೆ; ಏರ್ ಇಂಡಿಯಾ ಸಿಬ್ಬಂದಿ ಬಂಧನ

ನವದೆಹಲಿ, ನವೆಂಬರ್ 24 : ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಏರ್ ಇಂಡಿಯಾ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಎರಡು ಗಂಟೆಗಳ ನಿರಂತರ ವಿಚಾರಣೆ ಬಳಿಕ ಬಂಧಿಸಲಾಗಿದೆ.

ಟೊರೆಂಟೋದಿಂದ ನವದೆಹಲಿಗೆ ಆಗಮಿಸಿದ ವಿಮಾನದಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಣೆ ಮಾಡಲಾಗಿದೆ. ಸಾಗಣೆ ಮಾಡಲಾದ ಚಿನ್ನದ ಮೌಲ್ಯ ಸುಮಾರು 45 ಲಕ್ಷ ರೂ.ಗಳು ಎಂದು ಅಂದಾಜಿಸಲಾಗಿದೆ.

ಏರ್ ಇಂಡಿಯಾ ಸಿಬ್ಬಂದಿಯನ್ನು ಬಂಧಿಸಿರುವುದನ್ನು ಪತ್ರಿಕಾ ಪ್ರಕಟಣೆ ಮೂಲಕ ಮಂಗಳವಾರ ಖಚಿತಪಡಿಸಲಾಗಿದೆ. ಭಾರತಕ್ಕೆ ಆಗಮಿಸಿದ ವಿಮಾನದಲ್ಲಿ ಬೆಳ್ಳಿ ಲೇಪಿತ ಎರಡು ಕಡಗಗಳನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿದೆ.

Smuggling Gold Air India Crew Member Arrested

ನವೆಂಬರ್ 22ರಂದು ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿ ಬಂಧಿತ ಆರೋಪಿ. ಕಸ್ಟಮ್ಸ್ ಅಧಿಕಾರಿಗಳು ನಿರಂತರ 2 ತಾಸು ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ.

ವಿಮಾನ ನಿಲ್ದಾಣದ ದ್ವಾರದಲ್ಲಿ ಕಸ್ಟಮ್ಸ್ ಅಧಿಕಾರಿಗಳನ್ನು ಕಂಡ ಬಳಿಕ ಸಿಬ್ಬಂದಿ ವಿಮಾನದ ಸೀಟಿನ ಕೆಳಗೆ ಕಡಗಗಳನ್ನು ಬಚ್ಚಿಟ್ಟಿದ್ದ. ಅಧಿಕಾರಿಗಳ ವಿಚಾರಣೆ ಬಳಿಕ ವಿಮಾನದಲ್ಲಿದ್ದ ಅವುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+