• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ದಾಖಲು

|

ನವದೆಹಲಿ, ಜುಲೈ.30: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ 7 ಗಂಟೆ ವೇಳೆಗೆ ಆಸ್ಪತ್ರೆಗೆ ತೆರಳಿದ್ದು, ರೂಟಿನ್ ಚೆಕ್ ಅಪ್ ಮತ್ತು ವೈದ್ಯಕೀಯ ತಪಾಸಣೆಗೆ ಒಳಗಾಗಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎಂದಿನಂತೆ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಚೇರ್ ಮನ್ ಡಾ.ಡಿ.ಎಸ್.ರಾಣಾ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ, ದೆಹಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಎದೆ ಮತ್ತು ಉಸಿರಾಟದ ತಜ್ಞ ಡಾ.ಅರೂಪ್ ಕುಮಾರ್ ಬಸು ನೇತೃತ್ವದ ವೈದ್ಯರ ತಂಡವು ಸೋನಿಯಾ ಗಾಂಧಿಯವರ ಆರೋಗ್ಯ ತಪಾಸಣೆ ನಡೆಸಲಿದೆ ಎಂದು ಆರೋಗ್ಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಯುವ ಕಾಂಗ್ರೆಸ್ ಪ್ರಾರ್ಥನೆ:

ಪ್ರಸ್ತುತ ಗಂಗಾರಂ ಆಸ್ಪತ್ರೆಯಲ್ಲಿ ದಾಖಲಾದ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರ ಶೀಘ್ರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಮತ್ತೊಮ್ಮೆ ದೇಶವನ್ನು ಮುನ್ನಡೆಸಲು ಮತ್ತು ರಾಷ್ಟ್ರದ ಆಕಾಂಕ್ಷೆಗಳನ್ನು ಜೀವಂತಗೊಳಿಸಲು ನೀವು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಯುವ ಕಾಂಗ್ರೆಸ್ ಸಮಿತಿಯು ಟ್ವೀಟ್ ಮಾಡಿದೆ.

English summary
Sonia Gandhi Admitted To New Delhi Sir Ganga Ram Hospital For Routin Test .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more