ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ

|
Google Oneindia Kannada News

Recommended Video

ಮಲ್ಲಿಕಾರ್ಜುನ ಖರ್ಗೆ ಸ್ಥಾನಕ್ಕೆ ಸೋನಿಯಾ ಗಾಂಧಿ ನೇಮಕ

ನವದೆಹಲಿ, ಜೂನ್ 01: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಶನಿವಾರ ನವದೆಹಲಿಯಲ್ಲಿ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೋನಿಯಾ ಗಾಂಧಿ ಅವರ ಹೆಸರನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಶಿಫಾರಸ್ಸು ಮಾಡಿದ್ದರು.

ಸೋನಿಯಾ ಅಥವಾ ರಾಹುಲ್ ಯಾರಾಗಬಹುದು ಕಾಂಗ್ರೆಸ್ ಅಧ್ಯಕ್ಷರು?ಸೋನಿಯಾ ಅಥವಾ ರಾಹುಲ್ ಯಾರಾಗಬಹುದು ಕಾಂಗ್ರೆಸ್ ಅಧ್ಯಕ್ಷರು?

ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಕಡೇ ಪಕ್ಷ ಸಂಸತ್ತಿನಲ್ಲಿ ಪಕ್ಷದ ಅಧ್ಯಕ್ಷ ಸ್ಥಾನವನ್ನಾದರೂ ಬೇರೆಯವರು ವಹಿಸಿಕೊಳ್ಳುವಂತೆ ಸೂಚಿಸಿದ್ದರು. ತನ್ನಿಮಿತ್ತ ರಾಯ್ಬರೇಲಿ ಕ್ಷೇತ್ರದ ಸಂಸದೆ ಸೋನಿಯಾ ಗಾಂಧಿ ಅವರನ್ನು ಈ ಆಯ್ಕೆ ಮಾಡಲಾಗಿದೆ.

Sonia Gandhi has been elected as Chairperson of CPP

ಪ್ರತಿಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸೋಲುಂಡಿದ್ದರಿಂದ ಅವರ ಜಾಗದಲ್ಲಿ ಸೋನಿಯಾ ಗಾಂಧಿ ಅವರನ್ನು ಪ್ರತಿಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗುತ್ತಿದೆ.

ಬಿಜೆಪಿ ಹೊಡೆತಕ್ಕೆ ಕಂಗಾಲಾದ ಎನ್‌ಸಿಪಿ, ಕಾಂಗ್ರೆಸ್‌ನೊಂದಿಗೆ ವಿಲೀನ?ಬಿಜೆಪಿ ಹೊಡೆತಕ್ಕೆ ಕಂಗಾಲಾದ ಎನ್‌ಸಿಪಿ, ಕಾಂಗ್ರೆಸ್‌ನೊಂದಿಗೆ ವಿಲೀನ?

ಆದರೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನಮಾನ ಪಡೆಯಲು ಕಾಂಗ್ರೆಸ್ಸಿಗೆ ಇನ್ನೂ ಮೂರು ಸಂಸದರ ಅಗತ್ಯವಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ. ಮೇ 23 ರಂದು ಪ್ರಕಟವಾದ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಕೇವಲ 52 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ ಬಿಜೆಪಿ ಸ್ವತಂತ್ರವಾಗಿ 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಎನ್ ಡಿಎ ಮೈತ್ರಿಕೂಟ(353)ದ ಸರ್ಕಾರ ರಚನೆಯಾಗಿದೆ.

English summary
Sonia Gandhi has been elected as Chairperson of Congress Parliamentary Party (CPP).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X