ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೈಲಿನಲ್ಲಿರುವ ಡಿಕೆಶಿಯನ್ನು ಭೇಟಿ ಮಾಡಿದ ಸೋನಿಯಾ ಗಾಂಧಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 23: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಭೇಟಿ ಮಾಡಿದರು.

ಇಂದು ಮಧ್ಯಾಹ್ನ 2:30 ಕ್ಕೆ ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಸೋನಿಯಾ-ಡಿಕೆಶಿ ಭೇಟಿ ಮಹತ್ವದ್ದೆನ್ನಿಸಿದೆ.

ಬುಧವಾರ ಹೈಕೋರ್ಟ್‌ನಿಂದ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪುಬುಧವಾರ ಹೈಕೋರ್ಟ್‌ನಿಂದ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು

ದೆಹಲಿಯ ತಿಹಾರ್ ಜೈಲಿನಲ್ಲಿರುವ ಕನಕಪುರ ಶಾಸಕ ಡಿಕೆ ಶಿವಕುಮಾರ್ ಅವರನ್ನು ಸೋನಿಯಾ ಗಾಂಧಿ ಅವರು ಭೇಟಿ ಮಾಡುವ ಸಂದರ್ಭದಲ್ಲಿ ಆವರೊಂದಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಇದ್ದರು.

Sonia Gandhi meets DK Shivakumar in Tihar jail

ಜೈಲಿನಲ್ಲಿರುವ ಕಾಂಗ್ರೆಸ್ ನ ಇಬ್ಬರು ನಾಯಕರಾದ ಡಿಕೆ ಶಿ ಮತ್ತು ಪಿ ಚಿದಂಬರಂ ಅವರನ್ನು ಪಕ್ಷದ ನಾಯಕರು ಕಡೆಗಣಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದ ಹಿನ್ನೆಲೆಯಲ್ಲಿ, ಡಿಕೆ ಶಿ ಅವರನ್ನು ಭೇಟಿ ಮಾಡುವ ಮೂಲಕ ಆ ಎಲ್ಲ ವದಂತಿಗಳಿಗೆ ಸೋನಿಯಾ ಗಾಂಧಿ ತೆರೆ ಎಳೆದಿದ್ದಾರೆ.

ಡಿಕೆ ಶಿವಕುಮಾರ್ ಭೇಟಿ ಮಾಡದೆ ಹೊರಟ ಸೋನಿಯಾ: ಕಾರಣಗಳುಡಿಕೆ ಶಿವಕುಮಾರ್ ಭೇಟಿ ಮಾಡದೆ ಹೊರಟ ಸೋನಿಯಾ: ಕಾರಣಗಳು

ಆಗಸ್ಟ್ 2017 ರಲ್ಲಿ ಡಿಕೆಶಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ 8.50 ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿತ್ತು. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಲಭ್ಯವಾದ ಈ ಹಣಕ್ಕೆ ಯಾವುದೇ ರೀತಿಯ ಲೆಕ್ಕವಿರಲಿಲ್ಲ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೆ. 3ರಂದು ಇ.ಡಿ. ಡಿಕೆ ಶಿವಕುಮಾರ್ ಅವರನ್ನು ಬಂಧಿಸಿತ್ತು. ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು.

English summary
Congress President Sonia Gandhi On Wednesday meets Congress leader and MLA DK Shivakumar in Tihar Jail, New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X