ಶಿವಸೇನೆ ಜೊತೆ ಕಾಂಗ್ರೆಸ್ ಮೈತ್ರಿ: ಸೋನಿಯಾ ಗಾಂಧಿ ಹೇಳಿದ್ದೇನು?

ನವದೆಹಲಿ, ನವೆಂಬರ್ 04: ಮಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ವದಂತಿ ಕುರಿತಂತೆ ಮಾತನಾಡಿದ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ, "ಅಂಥ ಯಾವುದೇ ವಿಚಾರದ ಬಗ್ಗೆ ನಾವು ಚರ್ಚೆ ನಡೆಸಿಲ್ಲ" ಎಂದಿದ್ದಾರೆ.

ನ್ಯಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖಂಡ ಶರದ್ ಪವಾರ್ ಅವರೊಂದಿಗೆ ಸೋಮವಾರ ದೆಹಲಿಯಲ್ಲಿ ಮಾತುಕತೆ ನಡೆಸಿದ ಸೋನಿಯಾ ಗಾಂಧಿ, ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ನಾವು ಮಾತುಕತೆ ನಡೆಸಿಲ್ಲ ಎಂದರು.

Sonia Gandhi On Allianace With Shiv Sena In Maharashtra

ಸೋನಿಯಾ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಶರದ್ ಪವಾರ್ ಅವರು ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅಂತಿಮ ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗಿದ್ದು. ಆದರೆ ಇದೀಗ ಸೋನಿಯಾ ಗಾಂಧಿ ಅವರೇ ಆ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಕಳೆದ ಅಕ್ಟೋಬರ್ 21 ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಅಕ್ಟೋಬರ್ 24 ರಂದು ಹೊರಬಿದ್ದಿದ್ದು, ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ನಂಬರ್ 145. ಆದರೆ ಬಿಜೆಪಿ ಏಕಾಂಗಿಯಾಗಿ ಈ ಸ್ಥಾನ ಪಡೆಯಲು ಅಶಕ್ತವಾಗಿದ್ದರಿಂದ ಶಿವಸೇನೆಯ ಬೆಂಬಲ ಬಿಜೆಪಿಗೆ ಅನಿವಾರ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+