ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಸೇನೆ ಜೊತೆ ಕಾಂಗ್ರೆಸ್ ಮೈತ್ರಿ: ಸೋನಿಯಾ ಗಾಂಧಿ ಹೇಳಿದ್ದೇನು?

|
Google Oneindia Kannada News

ನವದೆಹಲಿ, ನವೆಂಬರ್ 04: ಮಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ವದಂತಿ ಕುರಿತಂತೆ ಮಾತನಾಡಿದ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ, "ಅಂಥ ಯಾವುದೇ ವಿಚಾರದ ಬಗ್ಗೆ ನಾವು ಚರ್ಚೆ ನಡೆಸಿಲ್ಲ" ಎಂದಿದ್ದಾರೆ.

ನ್ಯಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖಂಡ ಶರದ್ ಪವಾರ್ ಅವರೊಂದಿಗೆ ಸೋಮವಾರ ದೆಹಲಿಯಲ್ಲಿ ಮಾತುಕತೆ ನಡೆಸಿದ ಸೋನಿಯಾ ಗಾಂಧಿ, ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ನಾವು ಮಾತುಕತೆ ನಡೆಸಿಲ್ಲ ಎಂದರು.

ನಿರ್ಣಾಯಕ ಘಟ್ಟದಲ್ಲಿ ಮಹಾರಾಷ್ಟ್ರ ಸರಕಾರ ರಚನೆ: ಶರದ್ ಪವಾರ್ ಆಡಿದ್ದೇ 'ಪವರ್ ಪ್ಲೇ'ನಿರ್ಣಾಯಕ ಘಟ್ಟದಲ್ಲಿ ಮಹಾರಾಷ್ಟ್ರ ಸರಕಾರ ರಚನೆ: ಶರದ್ ಪವಾರ್ ಆಡಿದ್ದೇ 'ಪವರ್ ಪ್ಲೇ'

Sonia Gandhi On Allianace With Shiv Sena In Maharashtra

ಸೋನಿಯಾ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಶರದ್ ಪವಾರ್ ಅವರು ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅಂತಿಮ ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗಿದ್ದು. ಆದರೆ ಇದೀಗ ಸೋನಿಯಾ ಗಾಂಧಿ ಅವರೇ ಆ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ತಿರುವು, ಪವಾರ್ ಗೆ ಠಾಕ್ರೆ ಕರೆ!ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ತಿರುವು, ಪವಾರ್ ಗೆ ಠಾಕ್ರೆ ಕರೆ!

ಕಳೆದ ಅಕ್ಟೋಬರ್ 21 ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಅಕ್ಟೋಬರ್ 24 ರಂದು ಹೊರಬಿದ್ದಿದ್ದು, ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ನಂಬರ್ 145. ಆದರೆ ಬಿಜೆಪಿ ಏಕಾಂಗಿಯಾಗಿ ಈ ಸ್ಥಾನ ಪಡೆಯಲು ಅಶಕ್ತವಾಗಿದ್ದರಿಂದ ಶಿವಸೇನೆಯ ಬೆಂಬಲ ಬಿಜೆಪಿಗೆ ಅನಿವಾರ್ಯವಾಗಿದೆ.

English summary
Congress President Sonia Gandhi On Allianace With Shiv Sena In Maharashtra
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X