ಕೇಂದ್ರದಿಂದ 'ಆಧುನಿಕ ದೇವಸ್ಥಾನಗಳ ನಾಶ': ಸೋನಿಯಾ ಗಾಂಧಿ ಕಿಡಿ
ನವದೆಹಲಿ, ಜುಲೈ 2: ತಮ್ಮ ಕ್ಷೇತ್ರವಾದ ರಾಯ್ ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡಲು ಗುಪ್ತವಾಗಿ ಸಂಚು ನಡೆಸುತ್ತಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಆರೋಪಿಸಿದರು.
ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ರೈಲ್ವೆ ಕೋಚ್‌ಗಳನ್ನು ತಯಾರಿಸುವ ಮಾಡರ್ನ್ ಕೋಚ್ ಫ್ಯಾಕ್ಟರಿಯನ್ನು ಸದ್ದಿಲ್ಲದೇ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಫ್ಯಾಕ್ಟರಿಯ ಉದ್ಯೋಗಿಗಳು ಮತ್ತು ಅವರ ಕುಟುಂಬಗಳ ಬದುಕು ತೂಗುಯ್ಯಾಲೆಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಲೋಕಸಭೆಯ ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಖಾಸಗೀಕರಣವು ಸಾವಿರಾರು ಜನರು ನಿರುದ್ಯೋಗಿಗಳಾಗಲು ಕಾರಣವಾಗುತ್ತದೆ. ಅಲ್ಲದೆ, ಆ ಕಾರ್ಖಾನೆಯಲ್ಲಿ ಅಲ್ಲಿ ಸ್ಥಾಪಿಸಿದ ಉದ್ದೇಶಕ್ಕೂ ಇದು ವಿರುದ್ಧವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.
ಮಾಡರ್ನ್ ಕೋಚ್ ಫ್ಯಾಕ್ಟರಿಯನ್ನು ಅವರು ಪ್ರಯೋಗಕ್ಕೆ ಆಯ್ಕೆಮಾಡಿಕೊಂಡಿರುವುದು ನಿಜವಾದ ಆತಂಕದ ಸಂಗತಿ ಎಂದು ಹೇಳಿದರು.

ಅತ್ಯಾಧುನಿಕ ಕಾರ್ಖಾನೆ
ದೇಶದಲ್ಲಿನ ಉತ್ಪಾದನೆಯ ಚಟುವಟಿಕೆಯನ್ನು ಉತ್ತೇಜಿಸುವ ಸಲುವಾಗಿ ಯುಪಿಎ ಸರ್ಕಾರ ರಾಯ್ ಬರೇಲಿಯಲ್ಲಿ ಫ್ಯಾಕ್ಟರಿಯನ್ನು ನಿರ್ಮಿಸಿತ್ತು. ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಕೋಚ್‌ಗಳನ್ನು ತಯಾರಿಸುವ ಅತ್ಯಂತ ಆಧುನಿಕ ಘಟಕ ಇದಾಗಿದೆ ಎಂದು ಸೋನಿಯಾ ಗಾಂಧಿ ತಿಳಿಸಿದರು.

ಉದ್ಯೋಗಿಗಳು ಮತ್ತು ಕುಟುಂಬಕ್ಕೆ ಆಪತ್ತು
ಇಲ್ಲಿನ ಉದ್ಯೋಗಿಗಳನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದು ಉದ್ಯೋಗಿಗಳ ಮತ್ತು ಅವರನ್ನು ಅವಲಂಬಿಸಿರುವ ಕುಟುಂಬಗಳ ಭವಿಷ್ಯವನ್ನು ಆಪತ್ತಿಗೆ ತಳ್ಳಿರುವುದು ದುಃಖದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಮಾಡರ್ನ್ ಕೋಚ್ ಫ್ಯಾಕ್ಟರಿಯನ್ನು ಮತ್ತು ಇತರೆ ಸಾರ್ವಜನಿಕ ಉದ್ದಿಮೆಗಳನ್ನು ಉಳಿಸಬೇಕು ಮತ್ತು ಕಾರ್ಮಿಕರು ಹಾಗೂ ಅವರ ಕುಟುಂಬದವರನ್ನು ಗೌರವಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಸೋನಿಯಾ ಗಾಂಧಿ ಹೇಳಿದರು.

ಪರಿಸ್ಥಿತಿ ರಹಸ್ಯವಾಗಿ ಉಳಿದಿಲ್ಲ
ಅಲ್ಲದೆ, ಎಚ್‌ಎಎಲ್, ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್ಎಲ್ ಸೇರಿದಂತೆ ಕೆಲವು ಸಾರ್ವಜನಿಕ ವಲಯದ ಸಂಸ್ಥೆಗಳ ಪರಿಸ್ಥಿತಿಯ ಕುರಿತು ಸಹ ಅವರು ಕಳವಳ ವ್ಯಕ್ತಪಡಿಸಿದರು.
ಈ ಸಂಸ್ಥೆಗಳ ಪರಿಸ್ಥಿತಿ ಗೋಪ್ಯವಾಗಿ ಉಳಿದಿಲ್ಲ. ಖಾಸಗೀಕರಣದಿಂದ ಅತಿ ಅಮೂಲ್ಯ ಆಸ್ತಿಗಳು ತೀರಾ ಕಡಿಮೆ ಬೆಲೆಗೆ ಕೆಲವು ಖಾಸಗಿ ಕೈಗಳ ಪಾಲಾಗುತ್ತದೆ. ಅಲ್ಲದೆ ಸಾವಿರಾರು ಮಂದಿ ನಿರುದ್ಯೋಗಿಗಳಾಗುತ್ತಾರೆ ಎಂದು ಆಕ್ಷೇಪಿಸಿದರು.

ದೇವಸ್ಥಾನಗಳು ಅಪಾಯದಲ್ಲಿ
ಸಾರ್ವಜನಿಕ ಉದ್ದಿಮೆಗಳು ಆಧುನಿಕ ಭಾರತದ ದೇವಸ್ಥಾನಗಳು ಎಂದು ಪಂಡಿತ್ ಜವಹರಲಾಲ್ ನೆಹರೂ ಹೇಳಿದ್ದರು. ಅಂತಹ ಹೆಚ್ಚಿನ ದೇವಸ್ಥಾನಗಳು ಇಂದು ಅಪಾಯದಲ್ಲಿ ಇರುವುದನ್ನು ನೋಡಿ ನೋವಾಗುತ್ತದೆ. ಲಾಭಗಳಿದ್ದರೂ ಅವುಗಳ ನೌಕರರಿಗೆ ಸೂಕ್ತ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಕೆಲವು ಉದ್ಯಮಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಅವುಗಳನ್ನು ಸಂಕಷ್ಟಕ್ಕೆ ನೂಕಲಾಗಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications