'ನರೇಂದ್ರ ಮೋದಿ ಸರ್ಕಾರ ಅಪಾಯಕಾರಿ ಆಟವಾಡುತ್ತಿದೆ'
ನವದೆಹಲಿ, ಜೂ. 09 : 'ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳು ಭಯ ಮತ್ತು ಸೇಡಿನ ವಾತಾವರಣ ಸೃಷ್ಟಿಸುವಂತಹ ಹೇಳಿಕೆ ನೀಡಲು ಅವಕಾಶ ಮಾಡಿಕೊಡುತ್ತಿದ್ದಾರೆ. ಮೋದಿ ಸರ್ಕಾರ ಅಪಾಯಕಾರಿಯಾದ ಆಟ ಆಡುತ್ತಿದೆ' ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.
ಮಂಗಳವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಅವರು, 'ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಇದನ್ನು ಪಕ್ಷದ ಕಾರ್ಯಕರ್ತರು, ಮುಖಂಡರು ಬಲವಾಗಿ ವಿರೋಧಿಸಬೇಕು' ಎಂದು ಕರೆ ನೀಡಿದರು. [ಸಿದ್ದರಾಮಯ್ಯ ಸಂಪುಟದ ಸಚಿವರ ಅಂಕಪಟ್ಟಿ]
ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, 'ನರೇಂದ್ರ ಮೋದಿ ನನಗಿಂತ ಒಳ್ಳೆಯ ಸೇಲ್ಸ್ ಮ್ಯಾನ್, ಇವೆಂಟ್ ಮ್ಯಾನೇಜರ್ ಹಾಗೂ ಸಂವಹನಕಾರ ಹಳೆಯ ಯೋಜನೆಗಳಿಗೆ ಬಣ್ಣ ಬಳಿದು, ಹೊಸ ಯೋಜನೆಗಳೆಂದು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ಸೇರಿದಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. [ಪಿಟಿಐ ಚಿತ್ರಗಳು]

ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ
ಮಂಗಳವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಯಿತು. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರದ ಇಬ್ಬಗೆ ನೀತಿ
ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಅವರು, 'ಸಚಿವ ಸಂಪುಟದ ಸಹೋದ್ಯೋಗಿಗಳು ಭಯದ ಮತ್ತು ಸೇಡಿನ ವಾತಾವರಣ ಸೃಷ್ಟಿಸುವಂತಹ ಹೇಳಿಕೆ ನೀಡಲು ಅವಕಾಶ ಮಾಡಿಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಪಾಯಕಾರಿಯಾದ ಇಬ್ಬಗೆ ನೀತಿ ಅನುಸರಿಸುತ್ತಿದೆ' ವಾಗ್ದಾಳಿ ನಡೆಸಿದರು.

ಕೇಂದ್ರದ ಜೊತೆ ಹೊಂದಾಣಿಕೆ ಇರಲಿ
'ಜನರ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಸಹಕರಿಸಬೇಕು, ರಾಜ್ಯದ ಅಭಿವೃದ್ಧಿಗೆ ಇದು ಅಗತ್ಯ ಎಂದು ಹೇಳಿದ ಸೋನಿಯಾ ಗಾಂಧಿ ಅವರು, ನಿಮ್ಮ ರಾಜ್ಯದ ಒಳಿತಿಗಾಗಿ ನೀವೊಬ್ಬ ಮುಖ್ಯಮಂತ್ರಿಯಾಗಿ ಕೇಂದ್ರದ ಜೊತೆ ಹೊಂದಾಣಿಕೆಯಿಂದ ಕೆಲಸ ಮಾಡಿ. ಆದರೆ, ಪಕ್ಷದ ಕಾರ್ಯಕರ್ತರಾಗಿ ನಾವು ಮೋದಿ ಸರ್ಕಾರದ ವಿರುದ್ಧದ ನಮ್ಮ ಹೋರಾಟ ಮಾಡೋಣ' ಎಂದು ಕರೆ ನೀಡಿದರು.

ಅಧಿಕಾರ ವ್ಯಕ್ತಿ ಕೇಂದ್ರಿತವಾಗಿದೆ
'ಅಧಿಕಾರ ಕೇಂದ್ರೀಕರಣದ ಮೂಲಕ ಬಿಜೆಪಿ ಆಡಳಿತ ನಡೆಸುತ್ತಿದೆ. ಅಧಿಕಾರ ಕೇವಲ ಒಬ್ಬ ವ್ಯಕ್ತಿ ಕೇಂದ್ರೀಕೃತವಾಗಿದೆ. ಉತ್ತಮ ಆಡಳಿತದ ಚಾಂಪಿಯನ್ ತಾನೇ ಎಂಬುದಾಗಿ ಮೋದಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ' ಎಂದು ಸೋನಿಯಾ ಗಾಂಧಿ ಆರೋಪಿಸಿದರು.

ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ
'ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಅಭಿವೃದ್ಧಿಯನ್ನು ಕೇಂದ್ರ ಸರ್ಕಾರ ಕುಂಠಿತಗೊಳಿಸುತ್ತಿದೆ. ಇದನ್ನು ಪಕ್ಷದ ಕಾರ್ಯಕರ್ತರು, ಮುಖಂಡರು ಬಲವಾಗಿ ವಿರೋಧಿಸಬೇಕು. ಅದೇ ರೀತಿ ಭೂಸ್ವಾಧೀನ ಮಸೂದೆ, ಆಹಾರ ಭದ್ರತೆ ಕಾಯ್ದೆ ವಿರುದ್ಧ ಹೋರಾಟ ಮಾಡಬೇಕು' ಎಂದು ಸೋನಿಯಾ ಕರೆ ಕೊಟ್ಟರು.

'ಮೋದಿ ಸೇಲ್ಸ್ ಮ್ಯಾನ್'
ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, 'ಮೋದಿ ನನಗಿಂತ ಒಳ್ಳೆಯ ಸೇಲ್ಸ್ ಮ್ಯಾನ್, ಇವೆಂಟ್ ಮ್ಯಾನೇಜರ್ ಹಾಗೂ ಸಂವಹನಕಾರ ಎಂದರು. ಯುಪಿಎ ಸರ್ಕಾರದ ಯೋಜನೆಗಳನ್ನು ಮೋದಿ ಮತ್ತೆ ಪ್ಯಾಕ್ ಮಾಡಿ, ಹೊಸ ಯೋಜನೆಗಳೆಂದು ಅಬ್ಬರದ ಪ್ರಚಾರ ಮಾಡುತ್ತಿದೆ' ಎಂದು ದೂರಿದರು.












Click it and Unblock the Notifications