ದೇಶಕ್ಕಾಗಿಯಲ್ಲ, ತಮ್ಮ ಉಳಿವಿಗಾಗಿ ಎಸ್ಪಿ-ಬಿಎಸ್ಪಿ ಮೈತ್ರಿ: ಬಿಜೆಪಿ ಟೀಕೆ

ನವದೆಹಲಿ, ಜನವರಿ 12: "ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷಗಳು ತಮ್ಮ ಉಳಿವಿಗಾಗಿ ಮೈತ್ರಿ ಮಾಡಿಕೊಂಡಿವೆ. ಇದರಿಂದ ಲೋಕಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ" ಎಂದು ಬಿಜೆಪಿ ಹೇಳಿದೆ.

ದೆಹಲಿಯಲ್ಲಿ ನಡೆಯುತ್ತಿರುವ ನ್ಯಾಶ್ನಲ್ ಕೌನ್ಸೆಲ್ ಮೀಟಿಂಗ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದರು.

"ಬಿಎಸ್ಪಿಯಾಗಲೀ, ಎಸ್ಪಿಯಾಗಲೀ ಮೈತ್ರಿ ಮಾಡಿಕೊಂಡಿರುವುದು ದೇಶಕ್ಕಾಗಲೀ, ಉತ್ತರ ಪ್ರದೇಶಕ್ಕಾಗಲೀ ಅಲ್ಲ, ಕೇವಲ ತಮ್ಮ ಉಳಿವಿಗಾಗಿ. ಅವರಿಗೆ ಗೊತ್ತು, ಪ್ರಧಾನಿ ಮೋದಿ ಅವರನ್ನು ಸ್ವತಂತ್ರವಾಗಿ ಎದುರಿಸಲು ತಮಗೆ ಸಾಧ್ಯವಿಲ್ಲ ಎಂಬುದು. ಆದ್ದರಿಂದಲೇ ಅವರು ಮೈತ್ರಿ ಮೊರೆಹೋಗಿದ್ದಾರೆ" ಎಂದರು.

SP, BSP came together for their survival: BJP

ಲೋಕಸಭಾ ಚುನಾವಣೆಯ ಮೇಲೆ ಈ ಮೈತ್ರಿ ಮಹತ್ವದ ಪರಿಣಾಮ ಬೀರಲಿದೆ ಎಂಬ ಮಾತನ್ನು ಅಲ್ಲಗಳೆದ ರವಿಶಂಕರ್ ಪ್ರಸಾದ್, 'ಈ ಮೈತ್ರಿ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಚುನಾವಣೆ ಎಂದರೆ ಮ್ಯಾಥಮೆಟಿಕ್ಸ್ ಅಲ್ಲ, ಕೆಮೆಸ್ಟ್ರಿ" ಎಂದು ಅವರು ಮಾರ್ಮಿಕವಾಗಿ ಹೇಳಿದರು.

2019 ರ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದವು. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 76 ಕ್ಷೇತ್ರಗಳಲ್ಲಿ ಎಸ್ಪಿ-ಬಿಎಸ್ಪಿ ಸ್ಪರ್ಧಿಸಲಿದ್ದು, ತಲಾ 38 ಕ್ಷೇತ್ರಗಳನ್ನು ಸಮಾನವಾಗಿ ಹಂಚಿಕೊಂಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+