ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶಕ್ಕಾಗಿಯಲ್ಲ, ತಮ್ಮ ಉಳಿವಿಗಾಗಿ ಎಸ್ಪಿ-ಬಿಎಸ್ಪಿ ಮೈತ್ರಿ: ಬಿಜೆಪಿ ಟೀಕೆ

|
Google Oneindia Kannada News

ನವದೆಹಲಿ, ಜನವರಿ 12: "ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷಗಳು ತಮ್ಮ ಉಳಿವಿಗಾಗಿ ಮೈತ್ರಿ ಮಾಡಿಕೊಂಡಿವೆ. ಇದರಿಂದ ಲೋಕಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ" ಎಂದು ಬಿಜೆಪಿ ಹೇಳಿದೆ.

ಟೂ ಬಿಟ್ಟ ಮಾಯಾವತಿ... ಇನ್ನು ಏಕಾಂಗಿ ಹೋರಾಟವೇ ಕಾಂಗ್ರೆಸ್ಸಿಗೆ ಗತಿ!ಟೂ ಬಿಟ್ಟ ಮಾಯಾವತಿ... ಇನ್ನು ಏಕಾಂಗಿ ಹೋರಾಟವೇ ಕಾಂಗ್ರೆಸ್ಸಿಗೆ ಗತಿ!

ದೆಹಲಿಯಲ್ಲಿ ನಡೆಯುತ್ತಿರುವ ನ್ಯಾಶ್ನಲ್ ಕೌನ್ಸೆಲ್ ಮೀಟಿಂಗ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ಸಿಗೆ ಅಮೇಥಿ, ರಾಯ್ ಬರೇಲಿಯನ್ನು ಭಿಕ್ಷೆ ಕೊಟ್ಟರೆ ಮಾಯಾವತಿ? ಕಾಂಗ್ರೆಸ್ಸಿಗೆ ಅಮೇಥಿ, ರಾಯ್ ಬರೇಲಿಯನ್ನು ಭಿಕ್ಷೆ ಕೊಟ್ಟರೆ ಮಾಯಾವತಿ?

"ಬಿಎಸ್ಪಿಯಾಗಲೀ, ಎಸ್ಪಿಯಾಗಲೀ ಮೈತ್ರಿ ಮಾಡಿಕೊಂಡಿರುವುದು ದೇಶಕ್ಕಾಗಲೀ, ಉತ್ತರ ಪ್ರದೇಶಕ್ಕಾಗಲೀ ಅಲ್ಲ, ಕೇವಲ ತಮ್ಮ ಉಳಿವಿಗಾಗಿ. ಅವರಿಗೆ ಗೊತ್ತು, ಪ್ರಧಾನಿ ಮೋದಿ ಅವರನ್ನು ಸ್ವತಂತ್ರವಾಗಿ ಎದುರಿಸಲು ತಮಗೆ ಸಾಧ್ಯವಿಲ್ಲ ಎಂಬುದು. ಆದ್ದರಿಂದಲೇ ಅವರು ಮೈತ್ರಿ ಮೊರೆಹೋಗಿದ್ದಾರೆ" ಎಂದರು.

SP, BSP came together for their survival: BJP

ಲೋಕಸಭಾ ಚುನಾವಣೆಯ ಮೇಲೆ ಈ ಮೈತ್ರಿ ಮಹತ್ವದ ಪರಿಣಾಮ ಬೀರಲಿದೆ ಎಂಬ ಮಾತನ್ನು ಅಲ್ಲಗಳೆದ ರವಿಶಂಕರ್ ಪ್ರಸಾದ್, 'ಈ ಮೈತ್ರಿ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಚುನಾವಣೆ ಎಂದರೆ ಮ್ಯಾಥಮೆಟಿಕ್ಸ್ ಅಲ್ಲ, ಕೆಮೆಸ್ಟ್ರಿ" ಎಂದು ಅವರು ಮಾರ್ಮಿಕವಾಗಿ ಹೇಳಿದರು.

ಕಾಂಗ್ರೆಸ್ ಸಹವಾಸ ಬಿಡಲು ಕಾರಣ ನೀಡಿದ ಎಸ್‌ಪಿ, ಬಿಎಸ್‌ಪಿ ಮೈತ್ರಿಕಾಂಗ್ರೆಸ್ ಸಹವಾಸ ಬಿಡಲು ಕಾರಣ ನೀಡಿದ ಎಸ್‌ಪಿ, ಬಿಎಸ್‌ಪಿ ಮೈತ್ರಿ

2019 ರ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದವು. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 76 ಕ್ಷೇತ್ರಗಳಲ್ಲಿ ಎಸ್ಪಿ-ಬಿಎಸ್ಪಿ ಸ್ಪರ್ಧಿಸಲಿದ್ದು, ತಲಾ 38 ಕ್ಷೇತ್ರಗಳನ್ನು ಸಮಾನವಾಗಿ ಹಂಚಿಕೊಂಡಿವೆ.

English summary
The BJP on Saturday said the SP and the BSP came together for their survival, and not for the country or Uttar Pradesh, and downplayed suggestions that the alliance will have a major impact on the upcoming Lok Sabha polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X