• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಂತ್ ಕುಮಾರ್ ನಿಧನ: ಮೋದಿ ನೇತೃತ್ವದಲ್ಲಿ ವಿಶೇಷ ಸಭೆ

|

ನವದೆಹಲಿ, ನವೆಂಬರ್ 12: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಸಂತಾಪ ಸೂಚಕ ನಿರ್ಣಯ ಅಂಗೀಕರಿಸಲು ಕೇಂದ್ರ ಸಚಿವ ಸಂಪುಟ ವಿಶೇಷ ಸಭೆ ಕರೆದಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕೇಂದ್ರ ಸಚಿವರಾಗಿ, ಬಿಜೆಪಿ ನಾಯಕರಾಗಿ, ಸಮಾಜಸೇವಕರಾಗಿ ಅನಂತ್ ಕುಮಾರ್ ಅವರು ನೀಡಿದ ಕೊಡುಗೆ, ಸವೆಸಿದ ಹಾದಿಯ ಮೆಲುಕು ಹಾಕಿ, ಅವರಿಗೆ ಕೇಂದ್ರ ಸಚಿವ ಸಂಪುಟದ ವತಿಯಿಂದ ಸಂತಾಪ ಸೂಚಿಸಲಾಗುತ್ತಿದೆ.

ಅನಂತ್ ಕುಮಾರ್ ವಿಧಿವಶ: ಬೆಂಗಳೂರು ಬಿಜೆಪಿಗಾದ ಎರಡನೇ ದೊಡ್ಡ ಆಘಾತ

ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವರೂ ಆಗಿದ್ದ ಅನಂತ್ ಕುಮಾರ್ ಅವರು ಸೋಮವಾರ ಬೆಳಿಗ್ಗೆ ಸುಮಾರು 2 ಗಂಟೆಯ ಸುಮಾರಿಗೆ ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅನಂತತಾನಂತವಾಗಿ.... ಅಗಲಿದ ನಾಯಕಗೆ ಗಣ್ಯರ ಅಶ್ರುತರ್ಪಣ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರಿಗೆ 59 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಯಿಂದಾಗಿ ಕರ್ನಾಟಕ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು, ನವೆಂಬರ್ 12 ರಂದು ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

English summary
Central government calls a special cabinet meeting today to pay last respect to union minister Ananth Kumar. PM Narendra Modi will be presiding the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X