ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಗತ್ಯವಿಲ್ಲದ ಯೋಜನೆಗಳಿಗೆ ಖುರ್ಚು ಮಾಡುವ ಹಣವನ್ನು ಕೊರೊನಾ ಲಸಿಕೆ ಉತ್ಪಾದನೆಗೆ ಬಳಸಿ: ರಾಹುಲ್

|
Google Oneindia Kannada News

ನವದೆಹಲಿ, ಏಪ್ರಿಲ್ 24:ಅನಗತ್ಯ ಯೋಜನೆಗಳಿಗೆ ವ್ಯಯಿಸುವ ಹಣವನ್ನು ಕೊರೊನಾ ಲಸಿಕೆ ಉತ್ಪಾದನೆಗೆ ಬಳಕೆ ಮಾಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನಿನ್ನೆಯಷ್ಟೇ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲಿ ಕೊರೋನಾ ವೈರಸ್ ನಿಂದಲ್ಲ... ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸೋಂಕಿತರು ಸಾವನ್ನಪ್ಪುತ್ತಿದ್ದಾರೆಂದು ಆರೋಪಿಸಿದ್ದರು.

ಪ್ರಯೋಜನವಿಲ್ಲದ ಭಾಷಣ ಬಿಟ್ಟು, ಕೊರೊನಾಗೆ ಪರಿಹಾರ ನೀಡಿ: ರಾಹುಲ್ಪ್ರಯೋಜನವಿಲ್ಲದ ಭಾಷಣ ಬಿಟ್ಟು, ಕೊರೊನಾಗೆ ಪರಿಹಾರ ನೀಡಿ: ರಾಹುಲ್

ಕೊರೋನಾ ವೈರಸ್ ಸೋಂಕಿನಿಂದಾಗಿ ಮನುಷ್ಯನ ದೇಹದಲ್ಲಿ ಆಮ್ಲಜನಕದ ಕೊರತೆ ಮಾತ್ರ ಉಂಟಾಗುತ್ತದೆ. ಆದರೆ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ದೇಶದಲ್ಲಿ ರೋಗಿಗಳಿಗೆ ಅನಿವಾರ್ಯವಾಗಿ ಬೇಕಾದ ಆಮ್ಲಜನಕ ಜನಕದ ಸಿಲಿಂಡರ್ ಗಳು ಮತ್ತು ಐಸಿಯು ಬೆಡ್ ಕೊರತೆಯುಂಟಾಗಿದೆ. ಇದರಿಂದಲೇ ಸಾವಿರಾರು ಮಂದಿ ನಿತ್ಯ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ್ದರು.

Spend On COVID-19 Vaccines, Oxygen And Not On PR Projects: Rahul Gandhi Tells Centre

ಪಿಆರ್ ಹಾಗೂ ಇನ್ನಿತರೆ ಅನಗತ್ಯ ಯೋಜನೆಗಳ ಬದಲಿಗೆ ಕೊರೋನಾ ಲಸಿಕೆ, ಆ್ಯಕ್ಸಿಜನ್ ಹಾಗೂ ಇನ್ನಿತರೆ ಆರೋಗ್ಯ ಸೇವೆಗಳಿಗೆ ಹಣ ಖರ್ಚು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಾಂತಿಯುತವಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ.

ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದು. ಪರಿಸ್ಥಿತಿ ಎದುರಿಸಲು ದೇಶ ಸಜ್ಜಾಗಿರಬೇಕಿದೆ. ಪ್ರಸ್ತುತದ ಪರಿಸ್ಥಿತಿ ಅಸಹನೀಯವಾಗಿದೆ ಎಂದು ಹೇಳಿದ್ದಾರೆ.

Recommended Video

IPL ಗೆ ಗುಡ್ ಬೈ ಹೇಳಿದ T Natarajan | Oneindia Kannada

ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,46,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 1,66,10,481 ಕೊರೊನಾ ಸೋಂಕಿತರಿದ್ದಾರೆ, ಕಳೆದ 24 ಗಂಟೆಯಲ್ಲಿ 2624 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ 2,19,838 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Hitting out at the government’s spending on “PR and unnecessary projects”, Congress leader Rahul Gandhi on Saturday appealed to the Centre to focus on COVID-19 vaccines, oxygen and other health services.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X