• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಾಂಸ್ಕೃತಿಕವಾಗಿ ಆತ್ಮನಿರ್ಭರರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಮುಖ್ಯ: ರಾಜನಾಥ್ ಸಿಂಗ್

|

ನವದೆಹಲಿ, ಆಗಸ್ಟ್ 29: ಸಾಂಸ್ಕೃತಿಕವಾಗಿ ಆತ್ಮನಿರ್ಭರರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ 'ಸುತ್ತೂರು ಶ್ರೀ ಮಠ - ಗುರು ಪರಂಪರೆ' ಪುಸ್ತಕವನ್ನು ಬಿಡುಗಡೆ ಮಾಡಿದರು.

ಇಂದು ಸುತ್ತೂರು ಜಗದ್ಗುರು ವೀರಸಿಂಹಾಸನ ಮಠದ ವತಿಯಿಂದ ಆಯೋಜಿಸಲಾಗಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105ನೇ ಜಯಂತಿ ಮಹೋತ್ಸವವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸುತ್ತೂರು ಮಠ ಆಧ್ಯಾತ್ಮಕ ಮೌಲ್ಯಗಳು ಮತ್ತು ಆದರ್ಶಗಳ ಮೇಲೆ ಸಾಮಾಜಿಕ ಆರ್ಥಿಕ ನ್ಯಾಯ ಒದಗಿಸುವ ಕೆಲಸದಲ್ಲಿ ನಿರತವಾಗಿದೆ ಎಂದರು.

ಸುತ್ತೂರು ಮಠ ಅತ್ಯುತ್ತಮ ಸಾಂಸ್ಕೃತಿಕ ಚಳುವಳಿಯಾಗಿಯೂ ಕಾರ್ಯ ನಿರ್ವಹಿಸುತ್ತಿದೆ. ವಿದ್ಯ ಜತೆಗೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕೂಡ ಪಾಲ್ಗೊಂಡಿದ್ದರು. ಶಿವರಾತ್ರಿ ರಾಜೇಂದ್ರ ಸ್ವಾಮಿ ಹಾಗೂ ಮಂತ್ರ ಮಹರ್ಷಿ ಅವರ ಗದ್ದುಗೆಗೆ ಪೂಜೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಗಿತ್ತು.

English summary
Union Defence Minister Rajnath Singh said that becoming ‘Atmanirbhar’ is not just financially and economically, but also culturally and psychologically and for this, we need spiritual and religious guidance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X