ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪೋಲೋ ಆಸ್ಪತ್ರೆಯಲ್ಲಿ ಸ್ಪುಟ್ನಿಕ್-ವಿ ಲಸಿಕೆ ಸಿಗುವುದು ಯಾವಾಗ?

|
Google Oneindia Kannada News

ನವದೆಹಲಿ, ಜೂನ್ 13: ಭಾರತದಲ್ಲಿ ಸ್ಪುಟ್ನಿಕ್-ವಿ ಲಸಿಕೆ ವಿತರಣೆ ಆರಂಭಿಸುವುದು ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನವದೆಹಲಿ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಜೂನ್ 15ರಿಂದ ಸ್ಪುಟ್ನಿಕ್-ವಿ ಲಸಿಕೆ ವಿತರಣೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ.

ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆಯನ್ನು ಜೂನ್ ಎರಡನೇ ವಾರದಿಂದ ವಿತರಿಸುವುದಾಗಿ ಅಪೋಲೋ ಆಸ್ಪತ್ರೆ ಈ ಮೊದಲು ಘೋಷಿಸಿತ್ತು.

ಅಪೋಲೋ ಆಸ್ಪತ್ರೆಯಲ್ಲಿ ಪಡೆಯುವ ಸ್ಪುಟ್ನಿಕ್-ವಿ ಲಸಿಕೆಗೆ ಎಷ್ಟು ಬೆಲೆ?ಅಪೋಲೋ ಆಸ್ಪತ್ರೆಯಲ್ಲಿ ಪಡೆಯುವ ಸ್ಪುಟ್ನಿಕ್-ವಿ ಲಸಿಕೆಗೆ ಎಷ್ಟು ಬೆಲೆ?

ಮೊದಲ ಹಂತದಲ್ಲಿ ಅಪೋಲೋ ಆಸ್ಪತ್ರೆ ಹಾಗೂ ಡಾ. ರೆಡ್ಡೀಸ್ ಪ್ರಯೋಗಾಲಯವು ಮೇ 17ರಂದು ಹೈದ್ರಾಬಾದ್ ಹಾಗೂ ವಿಶಾಖಪಟ್ಟಣಂನ ಅಪೋಲೋ ಆಸ್ಪತ್ರೆಯಲ್ಲಿ ಸ್ಪುಟ್ನಿಕ್-ವಿ ಲಸಿಕೆ ವಿತರಣೆ ಆರಂಭಿಸಲಾಗಿದೆ.

ಅಪೋಲೋ ಆಸ್ಪತ್ರೆಯಲ್ಲಿ ಲಸಿಕೆ ಬೆಲೆ?

ಅಪೋಲೋ ಆಸ್ಪತ್ರೆಯಲ್ಲಿ ಲಸಿಕೆ ಬೆಲೆ?

ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ನೀಡುತ್ತಿರುವ ಸ್ಪುಟ್ನಿಕ್-ವಿ ಲಸಿಕೆಗೆ 995 ರೂಪಾಯಿ ಹಾಗೂ ಲಸಿಕೆ ವಿತರಣೆಗೆ 200 ರೂಪಾಯಿ ಸೇವಾ ಶುಲ್ಕ ವಿಧಿಸಲಾಗುತ್ತದೆ. ಒಂದು ಡೋಸ್ ಲಸಿಕೆಗೆ ಒಟ್ಟು 1,195 ರೂಪಾಯಿ ತೆಗೆದುಕೊಳ್ಳಲಾಗುತ್ತದೆ ಎಂದು ಅಪೋಲೋ ಗ್ರೂಪ್ ಆಫ್ ಹಾಸ್ಪಿಟಲ್ ಸ್ಪಷ್ಟಪಡಿಸಿದೆ.

ಕೊರೊನಾವೈರಸ್ ಸೋಂಕಿನಿಂದ ರಕ್ಷಿಸಲು ಅಗತ್ಯ

ಕೊರೊನಾವೈರಸ್ ಸೋಂಕಿನಿಂದ ರಕ್ಷಿಸಲು ಅಗತ್ಯ

"ದೇಶದಲ್ಲಿ ಅನುಮೋದನೆ ಪಡೆದಿರುವ ಕೊರೊನಾವೈರಸ್ ಸೋಂಕಿನ ಮೂರನೇ ಲಸಿಕೆಯ ವಿತರಣೆ ಪ್ರಕ್ರಿಯೆ ಜೂನ್ ಎರಡನೇ ವಾರದಿಂದ ಆರಂಭವಾಗಲಿದೆ. ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವ ಮೊದಲು ಯಾರೊಬ್ಬರೂ ಸುರಕ್ಷಿತರು ಎಂದು ನಂಬುವುದಕ್ಕೆ ಸಾಧ್ಯವಿಲ್ಲ" ಎಂದು ಅಪೋಲೋ ಗ್ರೂಪ್ ಆಫ್ ಹಾಸ್ಪಿಟಲ್ ನ ಎಕ್ಸಿಕ್ಯೂಟಿವ್ ವೈಸ್-ಚೇರ್ ಮನ್ ಶೋಭನಾ ಕಾಮಿನೇನಿ ತಿಳಿಸಿದ್ದಾರೆ. ಭಾರತದಾದ್ಯಂತ ಅಪೋಲೋ ಆಸ್ಪತ್ರೆಯ 80 ಕೇಂದ್ರಗಳಲ್ಲಿ 10 ಲಕ್ಷ ಜನರಿಗೆ ಸ್ಪುಟ್ನಿಕ್-ವಿ ಲಸಿಕೆಯನ್ನು ವಿತರಿಸುವ ಗುರಿ ಹೊಂದಲಾಗಿದೆ. ಮೊದಲ ಶ್ರೇಣಿ ಕಾರ್ಮಿಕರು, ಕಾರ್ಪೋರೇಟ್ ಉದ್ಯೋಗಿಗಳು ಮತ್ತು ಆದ್ಯತೆ ವಲಯವನ್ನು ಗುರುತಿಸಿ ಲಸಿಕೆ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

2 ಕೋಟಿ ಮಂದಿಗೆ ಸ್ಪುಟ್ನಿಕ್-ವಿ ಲಸಿಕೆ ವಿತರಣೆಯ ಗುರಿ

2 ಕೋಟಿ ಮಂದಿಗೆ ಸ್ಪುಟ್ನಿಕ್-ವಿ ಲಸಿಕೆ ವಿತರಣೆಯ ಗುರಿ

ಖಾಸಗಿ ವಲಯದ ಬೃಹತ್ ಲಸಿಕೆ ವಿತರಣಾ ಸಂಸ್ಥೆಯು ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೊತೆಗೆ ಕೈ ಜೋಡಿಸುವುದಾಗಿ ತಿಳಿಸಿದೆ. ಮೊದಲ 10 ಲಕ್ಷ ಜನರಿಗೆ ಲಸಿಕೆ ನೀಡುವುದಕ್ಕೆ 3 ವಾರಗಳನ್ನು ತೆಗೆದುಕೊಳ್ಳಲಾಗುವುದು. ಜೂನ್ ತಿಂಗಳಿನಲ್ಲಿ ಪ್ರತಿವಾರ 10 ಲಕ್ಷ ಜನರಿಗೆ ಲಸಿಕೆ ನೀಡಲಾಗುವುದು. ಜುಲೈ ವೇಳೆಗೆ ಈ ಸಂಖ್ಯೆಯನ್ನು ಇಮ್ಮಡಿಕೊಳಿಸಲಾಗುವುದು. ಸಪ್ಟೆಂಬರ್ ತಿಂಗಳ ವೇಳೆಗೆ 2 ಕೋಟಿ ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಅಪೋಲೋ ಗ್ರೂಪ್ ಆಫ್ ಹಾಸ್ಪಿಟಲ್ ನ ಎಕ್ಸಿಕ್ಯೂಟಿವ್ ವೈಸ್-ಚೇರ್ ಮನ್ ಶೋಭನಾ ಕಾಮಿನೇನಿ ತಿಳಿಸಿದ್ದಾರೆ.

ಭಾರತದಲ್ಲಿ ಅನುಮತಿ ನೀಡಲು ಕೊರೊನಾ ಲಸಿಕೆ

ಭಾರತದಲ್ಲಿ ಅನುಮತಿ ನೀಡಲು ಕೊರೊನಾ ಲಸಿಕೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕ್ ಸಂಸ್ಥೆಗಳು ಸಂಶೋಧಿಸಿದ ಮತ್ತು ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಹೈದ್ರಾಬಾದಿನ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

English summary
Sputnik V Vaccine Available At Delhi's Indraprastha Apollo Hospital From June 15th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X