ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ನಿರಾಳ: ಮಂಗಳವಾರ ಸಂಪುಟ ರಚನೆಗೆ ಅಮಿತ್ ಶಾ ಅಸ್ತು

|
Google Oneindia Kannada News

ನವದೆಹಲಿ, ಆಗಸ್ಟ್ 17: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೂ ಏಕ ವ್ಯಕ್ತಿ ಸರ್ಕಾರದಂತಾಗಿದ್ದ ಬಿಎಸ್ ಯಡಿಯೂರಪ್ಪ ಅವರು ಕೊನೆಗೂ ನಿರಾಳರಾಗಿದ್ದಾರೆ.

ಸಂಪುಟ ವಿಸ್ತರಣೆ ಹೈಕಮಾಂಡ್ ನಿರಾಸಕ್ತಿ: ಇಕ್ಕಟ್ಟಿನಲ್ಲಿ ಯಡಿಯೂರಪ್ಪಸಂಪುಟ ವಿಸ್ತರಣೆ ಹೈಕಮಾಂಡ್ ನಿರಾಸಕ್ತಿ: ಇಕ್ಕಟ್ಟಿನಲ್ಲಿ ಯಡಿಯೂರಪ್ಪ

ಸತತ ಪ್ರಯತ್ನದ ಬಳಿಕ ರಾಜ್ಯದಲ್ಲಿ ಸಂಪುಟ ರಚನೆಗೆ ಹೈಕಮಾಂಡ್‌ನಿಂದ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಮಂಗಳವಾರ ರಾಜ್ಯ ಸಚಿವ ಸಂಪುಟ ರಚನೆಯಾಗಲಿದೆ.

ಎರಡು ದಿನಗಳಿಂದ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ನಾಯಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಂಪುಟ ರಚನೆಯ ತುರ್ತು ಅಗತ್ಯದ ಬಗ್ಗೆ ಮನವರಿಕೆ ಮಾಡಿದ್ದಾರೆ.

State Cabinet Expansion On Tuesday Following BJP Legislature Party Meeting

ಜತೆಗೆ ಸಚಿವ ಸ್ಥಾನಕ್ಕೆ ಅರ್ಹರಾದ ಶಾಸಕರ ಪಟ್ಟಿ ನೀಡಿದ್ದಾರೆ. ಯಾವ ಕಾರಣಕ್ಕೆ ಸಚಿವ ಸ್ಥಾನ ನೀಡಬೇಕು ಎಂಬ ವಿವರಣೆ ನೀಡಿದ್ದಾರೆ. ಯಡಿಯೂರಪ್ಪ ಅವರ ವಿವರಣೆಗಳನ್ನು ಕೇಳಿಸಿಕೊಂಡಿರುವ ಅಮಿತ್ ಶಾ ಅವರು, ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಪರಿಶೀಲಿಸಿ ಭಾನುವಾರ ಸಂಜೆ ವೇಳೆಗೆ ಅಂತಿಮ ಮುದ್ರೆ ನೀಡುವುದಾಗಿ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಅದರ ಬಳಿಕ ಸಂಜೆ ವೇಳೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೊದಲ ಹಂತದಲ್ಲಿ 11ರಿಂದ 15 ಸಚಿವರು ಪ್ರಮಾಣವಚನ ಸ್ವೀಕಾರ ಮಾಡುವ ನಿರೀಕ್ಷೆಯಿದೆ.

English summary
BJP President Amit Shah has agreed for Karnataka state cabinet expansion. Around 15 ministers will take oath on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X