ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ ಸೋಲು: ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು?

|
Google Oneindia Kannada News

ದೆಹಲಿ, ಡಿಸೆಂಬರ್.10: ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ರಾಜ್ಯ ನಾಯಕರಷ್ಟೇ ಅಲ್ಲ, ಹೈಕಮಾಂಡ್ ಕೂಡಾ ಈ ಬಗ್ಗೆ ತಲೆ ಕೆಡಿಸಿಕೊಂಡಿದೆ.

ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿವೇಣುಗೋಪಾಲ್ ತಲೆದಂಡದ ಬಗ್ಗೆಯೂ ಎಲ್ಲಲ್ಲೂ ಸುದ್ದಿ ಆಗುತ್ತಿದೆ. ಆದರೆ, ಅದಕ್ಕೆಲ್ಲ ಸ್ವತಃ ಕೆ.ಸಿ.ವೇಣುಗೋಪಾಲ್ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಹರಿದಾಡುತ್ತಿರುವ ಸುದ್ದಿ ಕೇವಲ ವದಂತಿ ಎಂದು ಹೇಳಿದ್ದಾರೆ.

ಸಿದ್ದು, ದಿನೇಶ್ ಗುಂಡೂರಾವ್ ರಾಜೀನಾಮೆ: ಹಾಗೆ ಸುಮ್ಮನೆ!ಸಿದ್ದು, ದಿನೇಶ್ ಗುಂಡೂರಾವ್ ರಾಜೀನಾಮೆ: ಹಾಗೆ ಸುಮ್ಮನೆ!

ದೆಹಲಿಯಲ್ಲಿ ಮಾತನಾಡಿದ ಕೆ.ಸಿ.ವೇಣುಗೋಪಾಲ್, ತಮ್ಮ ರಾಜೀನಾಮೆ ಬಗ್ಗೆ ಕೆಲವರು ವದಂತಿ ಹಬ್ಬಿಸುತ್ತಿದ್ದಾರೆ. ಇದೆಲ್ಲ ಸುಳ್ಳು ಸುದ್ದಿ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಡುಗಡೆಗೆ ಕೋರಿಕೊಂಡಿದ್ದರಾ ವೇಣುಗೋಪಾಲ್?

ಬಿಡುಗಡೆಗೆ ಕೋರಿಕೊಂಡಿದ್ದರಾ ವೇಣುಗೋಪಾಲ್?

ಲೋಕಸಭಾ ಚುನಾವಣೆ ವೇಳೆಯಲ್ಲಿಯೇ ಕರ್ನಾಟಕರ ಉಸ್ತುವಾರಿ ಬೇಡ ಎಂದು ಸ್ವತಃ ಕೆ.ಸಿ.ವೇಣುಗೋಪಾಲ್ ಹೈಕಮಾಂಡ್ ಗೆ ಹೇಳಿದ್ದೆ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಅಂದೇ ನಾನು ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಸಿದ್ದರಾಮಯ್ಯ ಗುಂಡೂರಾವ್ ಪರ ಕೆಸಿವಿ ಬ್ಯಾಟಿಂಗ್

ಸಿದ್ದರಾಮಯ್ಯ ಗುಂಡೂರಾವ್ ಪರ ಕೆಸಿವಿ ಬ್ಯಾಟಿಂಗ್

ರಾಜ್ಯದಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ಮುಖಂಡನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ ನಿರ್ಧಾರ ಸರಿಯಾಗಿದೆ ಎಂದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧರಿರುವ ಪೊಲೀಸ್ ಇವರೇ!ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧರಿರುವ ಪೊಲೀಸ್ ಇವರೇ!

ಹೈಕಮಾಂಡ್ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೆ

ಹೈಕಮಾಂಡ್ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೆ

ರಾಜ್ಯದ ಇಬ್ಬರು ಘಟಾನುಘಟಿ ನಾಯಕರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಏನು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ರಾಜ್ಯ ಉಸ್ತುವಾರಿ ವಿರುದ್ಧ ಸಾಲು ಸಾಲು ಆರೋಪ

ರಾಜ್ಯ ಉಸ್ತುವಾರಿ ವಿರುದ್ಧ ಸಾಲು ಸಾಲು ಆರೋಪ

ಇದರ ಮಧ್ಯೆ ರಾಜ್ಯದಲ್ಲಿ ನಡೆಸಿದ ಮೂರು ಪ್ರಯೋಗಗಳಲ್ಲೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿಫಲವಾಗಿದ್ದಾರೆ. ಆಡಳಿತಾರೂಢ ಮೈತ್ರಿ ಸರ್ಕಾರವನ್ನು ಉಳಿಸುವಲ್ಲಿ ಸೋತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತಿದೆ. ಉಪ ಚುನಾವಣೆಯಲ್ಲೂ ನಿರೀಕ್ಷಿತ ಸ್ಥಾನ ತಂದು ಕೊಡುವಲ್ಲಿ ಕೆ.ಸಿ.ವೇಣುಗೋಪಾಲ್ ಫೇಲ್ ಆಗಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬದಲಾವಣೆ ಮಾಡುವಂತೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಎದುರು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

English summary
K.C.Venugopal Resigned For Karnataka State Congress Incharge Post. Its All Rumors. Venugopal Clarrified About The Issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X