ಬೆಂಗಳೂರಿನಲ್ಲಿ ಕ್ರೀಡಾ ಹಬ್ ಗೆ 70 ಕೋಟಿ: ಕೇಂದ್ರಕ್ಕೆ ಡಿಸಿಎಂ ಮನವಿ
ನವದೆಹಲಿ, ಸೆಪ್ಟೆಂಬರ್ 19: ಬೆಂಗಳೂರಲ್ಲಿ ಸ್ಪೋರ್ಟ್ಸ್ ಹಬ್ ನಿರ್ಮಾಣಕ್ಕೆ 70 ಕೋಟಿ ರೂ ಹಾಗೂ ರಾಜ್ಯದಲ್ಲಿ ಇತರೆ ಕ್ರೀಡಾ ಅಭಿವೃದ್ಧಿಗಾಗಿ ಅನುದಾನ ನೀಡುವಂತೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಬುಧವಾರ ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ವಿದ್ಯಾನಗರದಲ್ಲಿ ಸ್ಪೋರ್ಟ್ಸ್ ಹಬ್ ನಿರ್ಮಾಣಕ್ಕೆ 70 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಬೆಂಗಳೂರಿನ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಹಬ್ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿದ್ದು 70 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ. ಹೀಗಾಗಿ ಖೇಲೋ ಇಂಡಿಯಾ ಯೋಜನೆಯಡಿ ಈ ಕಾರ್ಯಕ್ರಮಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.

ಇದರ ಜೊತೆಗೆ, ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ, ಇದಕ್ಕೂ ಸಹ ಕೇಂದ್ರ ಕ್ರೀಡಾ ಇಲಾಖೆಯಿಂದ ಅನುದಾನ ನೀಡುವಂತೆಯೂ ಇದೇ ವೇಳೆ ಪ್ರಸ್ತಾವನೆ ಸಲ್ಲಿಸಿದರು. ಶೀಘ್ರವೇ ಅನುದಾನ ಬಿಡುಗಡೆಗೆ ಮನವಿ ಮಾಡಿದರು. ಪರಮೇಶ್ವರ ಅವರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.












Click it and Unblock the Notifications