ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಕ್ರೀಡಾ ಹಬ್ ಗೆ 70 ಕೋಟಿ: ಕೇಂದ್ರಕ್ಕೆ ಡಿಸಿಎಂ ಮನವಿ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 19: ಬೆಂಗಳೂರಲ್ಲಿ ಸ್ಪೋರ್ಟ್ಸ್ ಹಬ್ ನಿರ್ಮಾಣಕ್ಕೆ 70 ಕೋಟಿ ರೂ ಹಾಗೂ ರಾಜ್ಯದಲ್ಲಿ ಇತರೆ ಕ್ರೀಡಾ ಅಭಿವೃದ್ಧಿಗಾಗಿ ಅನುದಾನ ನೀಡುವಂತೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಬುಧವಾರ ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ವಿದ್ಯಾನಗರದಲ್ಲಿ ಸ್ಪೋರ್ಟ್ಸ್ ಹಬ್ ನಿರ್ಮಾಣಕ್ಕೆ 70 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಮಹತ್ವ ಪಡೆದುಕೊಂಡ ಸಿದ್ದರಾಮಯ್ಯ-ಪರಮೇಶ್ವರ್ ರಹಸ್ಯ ಮಾತುಕತೆಮಹತ್ವ ಪಡೆದುಕೊಂಡ ಸಿದ್ದರಾಮಯ್ಯ-ಪರಮೇಶ್ವರ್ ರಹಸ್ಯ ಮಾತುಕತೆ

ಬೆಂಗಳೂರಿನ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಹಬ್ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿದ್ದು 70 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ. ಹೀಗಾಗಿ ಖೇಲೋ ಇಂಡಿಯಾ ಯೋಜನೆಯಡಿ ಈ ಕಾರ್ಯಕ್ರಮಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.

ಸಿದ್ದರಾಮಯ್ಯ ಜನ್ಮ ಜಾಲಾಡಿ, ಪರಂ ಮೇಲೆ ಗೂಬೆ ಕೂರಿಸಿದ ಈಶ್ವರಪ್ಪಸಿದ್ದರಾಮಯ್ಯ ಜನ್ಮ ಜಾಲಾಡಿ, ಪರಂ ಮೇಲೆ ಗೂಬೆ ಕೂರಿಸಿದ ಈಶ್ವರಪ್ಪ

State sought center Rs70 Crore for sports hub near KIAL

ಇದರ ಜೊತೆಗೆ, ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ, ಇದಕ್ಕೂ ಸಹ ಕೇಂದ್ರ ಕ್ರೀಡಾ ಇಲಾಖೆಯಿಂದ ಅನುದಾನ ನೀಡುವಂತೆಯೂ ಇದೇ ವೇಳೆ ಪ್ರಸ್ತಾವನೆ ಸಲ್ಲಿಸಿದರು. ಶೀಘ್ರವೇ ಅನುದಾನ ಬಿಡುಗಡೆಗೆ ಮನವಿ ಮಾಡಿದರು. ಪರಮೇಶ್ವರ ಅವರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

English summary
Deputy chief minister Dr.G.Parameshwar has sought union sports minister Rajyavardhan Rathore of Rs.70 crores aide for sports hub construction near KIAL in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X