ದಾವಣಗೆರೆಯಲ್ಲಿ ದೇವದಾಸಿ ಪದ್ಧತಿ ಸುಪ್ರೀಂ ತರಾಟೆ
ನವದೆಹಲಿ, ಫೆ.13 : ದೇವದಾಸಿ ಪದ್ಧತಿ ಬಗ್ಗೆ ಕರ್ನಾಟಕದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗಾ ದೇವಸ್ಥಾನದಲ್ಲಿ ಮಹಿಳೆಯರನ್ನು ದೇವದಾಸಿಯರನ್ನಾಗಿ ಮಾಡುತ್ತಿರುವುದನ್ನು ತಡೆಯಲು ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಿದೆ.
ಸರ್ಕಾರರೇತರ ಸ್ವಯಂ ಸೇವಾ ಸಂಸ್ಥೆ ಎಸ್.ಎಲ್ ಫೌಂಡೇಶನ್ ಗುರುವಾರ ಸುಪ್ರೀಂಕೋರ್ಟ್ ನಲ್ಲಿ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ದೇವಾಲಯದಲ್ಲಿ ಗುರುವಾರ ರಾತ್ರಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ದಲಿತ ಮಹಿಳೆಯರನ್ನು ದೇವದಾಸಿಗಳನ್ನಾಗಿ ಮಾಡಲಾಗುತ್ತದೆ ಇದನ್ನು ತಡೆಯುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಸದಾಶಿವಂ ಅವರ ಪೀಠ, ದೇವದಾಸಿ ಪದ್ಧತಿಯಿಂದ ಮಹಿಳೆಯನ್ನು ಮುಕ್ತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರದ ಕಾರ್ಯದರ್ಶಿಗಳಿಗೆ ಸೂಚನೆ ನೀಡಿತು.
ಕರ್ನಾಟಕ ಸರ್ಕಾರ ದೇವದಾಸಿ ಪದ್ಧತಿ ತಡೆಯಲು ವಿಫಲವಾಗಿರುವುದು ದೇಶಕ್ಕೆ ನಾಚಿಕೆಗೇಡು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ತಕ್ಷಣ ಈ ಪದ್ಧತಿಯನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಆದೇಶಿಸಿತು. ದೇವದಾಸಿ ಪದ್ಧತಿಯನ್ನು ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡಬೇಕೆಂದು ಸರ್ಕಾರಕ್ಕೆ ಸೂಚಿಸಿದೆ.











Click it and Unblock the Notifications