ಬೆಳ್ಳಂದೂರು ಕೆರೆ ಮಾಲಿನ್ಯಕ್ಕೆ ಎನ್ ಜಿಟಿಯಿಂದ ರಾಜ್ಯ ಸರಕಾರದ ತರಾಟೆ

By: ಒನ್ಇಂಡಿಯಾ ಪ್ರತಿನಿಧಿ
Subscribe to Oneindia Kannada

ನವದೆಹಲಿ, ಏಪ್ರಿಲ್ 13: ಕರ್ನಾಟಕ ಸರಕಾರಕ್ಕೆ ರಾಷ್ಟ್ರೀಯ ಹಸಿರು ಮಂಡಳಿ (ಎನ್ ಜಿಟಿ) ಖಡಕ್ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಕಲುಷಿತ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ನಮ್ಮ ಆದೇಶದ ಬಗ್ಗೆ ನಿರ್ಲಕ್ಷ್ಯ ಮಾಡಲಾಗಿದೆ ಎಂದೇ ಪರಿಗಣಿಸುತ್ತೇವೆ ಎಂದು ಹೇಳಿದೆ.

ಕಳೆದ ಫೆಬ್ರವರಿ 16ನೇ ತಾರೀಕು ಬೆಳ್ಳಂದೂರು ಕೆರೆಯಲ್ಲಿ ನೊರೆ ಪ್ರಮಾಣ ವಿಪರೀತ ಹೆಚ್ಚಾಗಿ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಕೆರೆಯ ಅಕ್ಕಪಕ್ಕದ ಪ್ರದೇಶದ ನಿವಾಸಿಗಳಿಗೆ ಸಮಸ್ಯೆಯಾಗಿತ್ತು. ಆ ನಂತರ ನ್ಯಾಯಮೂರ್ತಿ ಸ್ವತಂತ್ರಕುಮಾರ್ ನೇತೃತ್ವದ ಪೀಠ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.[ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ]

Stop effluent flow into Bellandur Lake: NGT

ಬುಧವಾರ ವಿಚಾರಣೆ ನಡೆದ ವೇಳೆ ಕೆರೆಯ ಸ್ಥಿತಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಕರ್ನಾಟಕ ಕೆರೆ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಕೂಡ ಆಕ್ಷೇಪ ಸೂಚಿಸಿತು. ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂದಿತು. ಈ ರೀತಿ ಕೆರೆಯಲ್ಲಿ ಬೆಂಕಿ ಹೊತ್ತಿಕೊಳ್ಳದಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪೀಠವು ಪ್ರಶ್ನಿಸಿತು.

ಮುಂದಿನ ವಿಚಾರಣೆಗೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಲಾಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Coming to the rescue of the ailing and extremely polluted Bellandur Lake, National Green Tribunal (NGT) on Wednesday not only slammed the state government but also said that restraining directions would be passed against it if discharge of untreated sewage into the lake is not stopped immediately.
Please Wait while comments are loading...