ಸೇನಾ ಕಾರ್ಯಾಚರಣೆ ಕುರಿತ ರಾಜಕೀಯಕ್ಕೆ ತೆರೆ ಎಳೆಯಲು ಚುನಾವಣಾ ಆಯೋಗಕ್ಕೆ ಮನವಿ

ನವದೆಹಲಿ, ಮಾರ್ಚ್ 9: ಸೇನಾ ಕಾರ್ಯಾಚರಣೆ ಹಾಗೂ ಸೇನೆಯ ಚಟುವಟಿಕೆಗಳನ್ನು ಚುನಾವಣೆ ಅಥವಾ ರಾಜಕೀಯ ವಿಚಾರಕ್ಕೆ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕೆಂದು ಕೇಂದ್ರ ಚುನಾವಣಾ ಆಯೋಗಕ್ಕೆ ನೌಕಾ ಸೇನೆಯ ಮಾಜಿ ಮುಖ್ಯಸ್ಥರು ಪತ್ರ ಬರೆದಿದ್ದಾರೆ.

ನೌಕಾ ಸೇನೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್‌ ಅವರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದು ಆಯೋಗ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಹೇಳಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಹಾಗೂ ಇತರೆ ಉಗ್ರ ನಿಗ್ರಹ ಕಾರ್ಯಾಚರಣೆ ಕುರಿತಂತೆ ಭಾರತದಲ್ಲಿ ನಡೆಯುತ್ತಿರುವ ರಾಜಕೀಯ ಆರೋಪ, ಪ್ರತ್ಯಾರೋಪಗಳ ಬೆನ್ನಲ್ಲೇ ಈ ಬೆಳವಣಿಗೆಗಳು ನಡೆದಿದೆ.

ಆಡಳಿತ ಪಕ್ಷ ಬಿಜೆಪಿಯು ಸರ್ಜಿಕಲ್ ಸ್ಟ್ರೈಕನ್ನು ರಾಜಕೀಯ ವಿಚಾರಕ್ಕೆ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಪ್ರತಿ ದಿನ ಕಾಂಗ್ರೆಸ್ ಈ ಕುರಿತು ಬಿಜೆಪಿ ಮೇಲೆ ರಾಜಕೀಯ ದಾಳಿ ನಡೆಸುತ್ತಿದೆ.

stop Misuse Of Armed Forces Work In Polls

ಚುನಾವಣಾ ಸಮೀಪವಾಗುತ್ತಿರುವ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ ಹಾಗಾಗಿ ಕೂಡಲೇ ಆಯೋಗ ಮಧ್ಯ ಪ್ರವೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬರಲು ಭಾರತೀಯ ಸೇನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+