• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನರ್ಸರಿ ಟು 8ನೇ ತರಗತಿ ಪರೀಕ್ಷೆ ಇಲ್ಲದೆ ತೇರ್ಗಡೆ: ದೆಹಲಿ ಸರ್ಕಾರ

|

ದೆಹಲಿ, ಮಾರ್ಚ್ 30: ದೇಶಾದ್ಯಂತ ಕೊರೊನಾ ಭೀತಿ ಇರುವ ಕಾರಣ ಶಾಲಾ ಕಾಲೇಜುಗಳಲ್ಲಿ ನಡೆಯಬೇಕಿದ ವಾರ್ಷಿಕ ಪರೀಕ್ಷೆಗಳು ಸ್ಥಗಿತವಾಗಿದೆ. ಅನೇಕ ರಾಜ್ಯಗಳಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಆದರೆ, ಕೊರೊನಾ ಹರಡುವಿಕೆ ಕಡಿಮೆಯಾಗುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಹೀಗಾಗಿ, ನರ್ಸರಿ ಇಂದು 8ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ತೇರ್ಗಡೆ ಮಾಡುವಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆದೇಶಿಸಿದ್ದಾರೆ.

SSLC ಪರೀಕ್ಷೆಗಳನ್ನು ಮುಂದೂಡುವ ಚಿಂತನೆ ಇಲ್ಲ: ಸಚಿವ ಸುರೇಶ್ ಕುಮಾರ್

ಈ ಕುರಿತು ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ ಮತ್ತು ಫೋನ್‌ ಮೂಲಕ ಅವರಿಗೆ ಸಲಹೆ ನೀಡಿ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಹಿಂದೆ ಉತ್ತರ ಪ್ರದೇಶ ಮತ್ತು ಕೇಂದ್ರಿಯ ವಿಶ್ವವಿದ್ಯಾಲಯಗಳು ನರ್ಸರಿ ಇಂದ 8ನೇ ತರಗತಿಯವರೆಗೂ ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ನಿರ್ಧಾರ ಪ್ರಕಟಿಸಿದ್ದರು.

ಈ ಕಡೆ ಕರ್ನಾಟಕದಲ್ಲಿ ಕೆಲವು ಕಡೆ ಪರೀಕ್ಷೆ ಇಲ್ಲದೇ ಪ್ರಾಥಮಿಕ ಶಿಕ್ಷಣ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಆದರೆ ಎಸ್‌ಎಸ್‌ಎಲ್‌ಸಿ ಕುರಿತು ರಾಜ್ಯ ಸರ್ಕಾರ ಆಗಲಿ ಅಥವಾ ಶಿಕ್ಷಣ ಸಚಿವರು ಇನ್ನು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

English summary
Students fromManish Sisodia nursery to class 8th in Delhi will be promoted to next class under no detention policy: Deputy CM Manish Sisodia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X