• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಬ್ರಮಣಿಯನ್ ಸ್ವಾಮಿ ಹೊಗಳಿಕೆಗೆ ಭಾಜನರಾದ ಸಿಎಂ ಯಡಿಯೂರಪ್ಪ

|

ನವದೆಹಲಿ, ಡಿಸೆಂಬರ್ 09: ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳನ್ನು ಗೆದ್ದಿದೆ. ಹೀಗಾಗಿ ಈ ಸಾಧನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ನೇಹಿತ ಸುಬ್ರಮಣಿಯನ್ ಸ್ವಾಮಿ ಹಾಡಿ ಹೊಗಳಿದ್ದಾರೆ.

ನನ್ನ ಸಹೋದ್ಯೋಗಿ, ಸ್ನೇಹಿತ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದ ಮಹತ್ವದ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಜಯಿಸಿದ್ದಾರೆ, ಅವರಿಗೆ ನನ್ನ ಅಭಿನಂದನೆಗಳು ಎಂದು ಯಡಿಯೂರಪ್ಪ ಅವರನ್ನು ಸುಬ್ರಮಣಿಯನ್ ಸ್ವಾಮಿ ಶುಭಾಶಯ ಕೋರಿದ್ದಾರೆ.

ಉಪ ಚುನಾವಣೆ ಫಲಿತಾಂಶ; ಕರ್ನಾಟಕ ವಿಧಾನಸಭೆ ಬಲಾಬಲ

ಕರ್ನಾಟಕದ ಹದಿನೈದು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಡಿಸೆಂಬರ್ 05 ರಂದು ನಡೆದಿತ್ತು. ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ 12 ಸ್ಥಾನಗಳನ್ನು ಗೆದ್ದು ಸರ್ಕಾರಕ್ಕೆ ಸ್ಪಷ್ಟ ಬಹುಮತ ಬಂದಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮೂಲಕ ಮುಖ್ಯಮಂತ್ರಿಗೆ ಶುಭಾಶಯ ತಿಳಿಸಿದ್ದಾರೆ.

ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಹೊಗಳಿರುವುದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸ್ವಾಮಿ ಅವರ ಹೊಗಳಿಕೆಗೆ ಪ್ರತಿಯಾಗಿ ಯಡಿಯೂರಪ್ಪ ಅವರು ಸಹ ಧನ್ಯವಾದ ತಿಳಿಸಿದ್ದಾರೆ.

English summary
In The By Election, The Bharatiya Janata Party (BJP) Has Won 12 Out of the 15 seats. Subramanian Swamy Praised To His Friend Chief Minister Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X