ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಪ್ರಿಯಾಂಕಾ ಗಾಂಧಿ ಮಾನಸಿಕ ಕಾಯಿಲೆ ಇದೆ, ರಾಜಕೀಯಕ್ಕೆ ಸರಿ ಹೊಂದಲ್ಲ'

|
Google Oneindia Kannada News

Recommended Video

ಪ್ರಿಯಾಂಕಾ ಗಾಂಧಿ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸುಬ್ರಹ್ಮಣಿಯನ್ ಸ್ವಾಮಿ | Oneindia Kannada

ನವದೆಹಲಿ, ಜನವರಿ 27: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ಅಧಿಕೃತವಾಗಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಬಿಜೆಪಿ ಮುಖಂಡರಿಂದ ಟೀಕೆ, ಟಿಪ್ಪಣಿ, ಪ್ರತಿಕ್ರಿಯೆಗಳು ಹರಿದು ಬರುತ್ತಿವೆ.

ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪ್ರಿಯಾಂಕಾ ಗಾಂಧಿ ಬಗ್ಗೆ ಮಾತನಾಡಿ, ಅವರಿಗೆ ಮಾನಸಿಕ ಕಾಯಿಲೆಯಿದೆ. ಹೀಗಾಗಿ, ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿ ಇರಲು ಸಾಧ್ಯವಿಲ್ಲ. ಇದನ್ನು ಬೈಪೋಲಾರ್​ ಡಿಸಾರ್ಡರ್​ಎಂದು ಕರೆಯಲಾಗುತ್ತದೆ. ಅವರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಜನರಿಗೆ ಹೊಡೆಯುತ್ತಾರೆ. ಸಾಮಾನ್ಯರಂತೆ ಬಾಳಲು ಸಾಧ್ಯವಾಗುತ್ತಿಲ್ಲ. ಅವರ ಮನಸ್ಸಿನ ಸ್ಥಿತಿ ನಿಯಂತ್ರಣದಲ್ಲಿರುವುದಿಲ್ಲ, ಈ ಬಗ್ಗೆ ಹೆಚ್ಚು ಜನರಿಗೆ ತಿಳಿದಿಲ್ಲ. ಈ ಬಗ್ಗೆ ಸಾರ್ವಜನಿಕರು ತಿಳಿದು ಕೊಂಡಿರಬೇಕು ಎಂದು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

Subramanian Swamy: Priyanka Gandhi has bipolar disorder, she beats up people

ಪ್ರಿಯಾಂಕ ಎಲ್ಲಿಂದ ಸ್ಪರ್ಧೆ? ಇನ್ನಷ್ಟು ಗೊಂದಲ ಹುಟ್ಟುಹಾಕಿದ ಕಾಂಗ್ರೆಸ್ ಟ್ವೀಟ್ಪ್ರಿಯಾಂಕ ಎಲ್ಲಿಂದ ಸ್ಪರ್ಧೆ? ಇನ್ನಷ್ಟು ಗೊಂದಲ ಹುಟ್ಟುಹಾಕಿದ ಕಾಂಗ್ರೆಸ್ ಟ್ವೀಟ್

ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಜನವರಿ 23ರಂದು ಉತ್ತರಪ್ರದೇಶ ಪೂರ್ವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಲಿದ್ದು, ನಂತರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಸುದ್ದಿಯಿದೆ.

'ಮೋದಿ ವರ್ಚಸ್ಸನ್ನು ಕಡಿಮೆ ಮಾಡಿದ ಪ್ರಿಯಾಂಕಾ ರಾಜಕೀಯ ಪ್ರವೇಶ' 'ಮೋದಿ ವರ್ಚಸ್ಸನ್ನು ಕಡಿಮೆ ಮಾಡಿದ ಪ್ರಿಯಾಂಕಾ ರಾಜಕೀಯ ಪ್ರವೇಶ'

ಉತ್ತರ ಪ್ರದೇಶದ ರಾಯ್‌ ಬರೇಲಿ ಸೋನಿಯಾ ಗಾಂಧಿ ಅವರ ಕಾಯಂ ಲೋಕಸಭಾ ಕ್ಷೇತ್ರವಾಗಿತ್ತು. ಸತತ ನಾಲ್ಕು ಅವಧಿಗಳಲ್ಲಿ ಸೋನಿಯಾ ಇಲ್ಲಿಂದ ಆರಿಸಿ ಬಂದಿದ್ದಾರೆ. ಈಗ ಅನಾರೋಗ್ಯದ ಕಾರಣ ಸೋನಿಯಾ ಸ್ಪರ್ಧೆಗೆ ಇಳಿಯುವ ಸಾಧ್ಯತೆ ತೀರಾ ಕಡಿಮೆ. ಹೀಗಾಗಿ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ.

English summary
BJP MP Subramanian Swamy is no stranger to bizarre claims. Priyanka Gandhi has found herself at the receiving end of criticism from BJP leaders increasingly after her recent foray in active politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X